ಕಾಸರಗೋಡು: ಜಿಲ್ಲಾಧಿಕಾರಿ ಡಾ. ಡಿ.ಸಜಿತ್ ಬಾಬು ಅವರು ಇ-ಗವರ್ನೆನ್ಸ್‍ನ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಕೈಗೊಂಡ ಉತ್ತಮ ಸಾಧನೆ ಪರಿಗಣಿಸಿ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಅಂಗವೈಕಲ್ಯ ಹೊಂದಿದವರಿಗಾಗಿ ಜಿಲ್ಲೆಯಲ್ಲಿ ನಡೆಸಿರುವ 'ವಿ ಡಿಸರ್ವ್'ಕಾರ್ಯಕ್ರಮಕ್ಕೆ ಈ ಪುರಸ್ಕಾರ ನೀಡಲಾಗುತ್ತಿದೆ. ಚಿನ್ನದ ಪದಕ, ಪ್ರಶಸ್ತಿ ಫಲಕ ಒಳಗೊಂಡಿದೆ.
ಫೆಬ್ರವರಿ 7ರಂದು ಮುಂಬೈಯಲ್ಲಿ ನಡೆಯುವ ಇ-ಗವರ್ನೆನ್ಸ್ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಶಸ್ತಿಪ್ರದಾನ ಮಾಡಲಾಗುವುದು. ಕಾಸರಗೋಡು ಜಿಲ್ಲೆಗೆ ಇದೇ ಮೊದಲ ಬಾರಿಗೆ ಈ ರೀತಿಯ ಪ್ರಶಸ್ತಿ ಲಭ್ಯವಾಗುತ್ತಿದೆ. ಜಿಲ್ಲಾಧಿಕಾರಿ ಡಾ. ಡಿ.ಸಜಿತ್‍ಬಾಬು ಅವರ ನೇತೃತ್ವದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿತ್ತು.


