ಮಂಜೇಶ್ವರ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಮಂಜೇಶ್ವರ ಉಪಜಿಲ್ಲಾ ಘಟಕದ ವತಿಯಿಂದ ಶಿಕ್ಷಣ ಇಲಾಖೆಯ ಪರೀಕ್ಷಾ ತರಬೇತಿಯು ಐಲ ಶ್ರೀ ಶಾರದಾ ಬೋವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅಧ್ಯಾಪಕರು ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಲು ಸರ್ಕಾರದ ಆದೇಶದಂತೆ ಶಿಕ್ಷಣ ಇಲಾಖೆಯ ಪರೀಕ್ಷೆಯ ತೇರ್ಗಡೆ ಅಗತ್ಯ ಬರುವುದರಿಂದ ಅದಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ತರಬೇತಿಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಟಿ. ಡಿ. ಸದಾಶಿವ ರಾವ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಮಂಜೇಶ್ವರ ಉಪಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ಕೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಪಿ. ಬಿ ಶ್ರೀನಿವಾಸ ರಾವ್, ಕೋಶಾಧಿಕಾರಿ ಪದ್ಮಾವತಿ ಎಂ, ಕಾರ್ಯದರ್ಶಿ ಸುಖೇಶ್ ಎ, ಐಲ ಶಾಲೆಯ ಹಿರಿಯ ಶಿಕ್ಷಕಿ ಭಾರತಿ ಉಪಸ್ಥಿತರಿದ್ದು ಶುಭ ಕೋರಿದರು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಮಂಜೇಶ್ವರ ಉಪಜಿಲ್ಲಾ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಕೋಶಾಧಿಕಾರಿ ಜೀವನ್ ಕುಮಾರ್ ವಂದಿಸಿದರು.
ಬಳಿಕ ಸಂಪನ್ಮೂಲ ವ್ಯಕ್ತಿ ಪಿ. ಬಿ ಶ್ರೀನಿವಾಸ ರಾವ್ ರವರಿಂದ ತರಬೇತಿಯು ನಡೆಯಿತು. ಸುಖೇಶ್ ಎ ಸಹಕರಿಸಿದರು.




