ಕಾಸರಗೋಡು: ಕಾಸರಗೋಡು ಜಿಲ್ಲೆಯ ದೇವಸ್ಥಾನಗಳ ಬ್ರಹ್ಮಕಲಶೋತ್ಸವಗಳ ಯಶಸ್ಸಿನಲ್ಲಿ ಮಹಿಳೆಯರ ಪಾತ್ರ ಮಹತ್ತರ ಎಂಬುದಾಗಿ ನಿವೃತ್ತ ಶಿಕ್ಷಕಿ, ಧಾರ್ಮಿಕ ಮುಂದಾಳು ಜಲಜಾಕ್ಷಿ ಟೀಚರ್ ಅಭಿಪ್ರಾಯಪಟ್ಟರು. ಇದೇ ಮಾದರಿಯಲ್ಲಿ ಕುದ್ರೆಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ 24 ರಿಂದ 29 ರ ವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಬ್ರಹ್ಮಕಲಶೋತ್ಸವ ಸಮಿತಿಯ ಜೊತೆಗೆ ಮಹಿಳೆಯರು ಕೈಜೋಡಿಸಬೇಕೆಂದು ಅವರು ಹೇಳಿದರು.
ದೇವಸ್ಥಾನದಲ್ಲಿ ಜರಗಿದ ಮಹಿಳೆಯರ ವಿಶೇಷ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಸಮಿತಿಯ ಅಧ್ಯಕ್ಷೆ ಶ್ಯಾಮಲಾ ಎಂ.ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಅಶೋಕ ರೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರೇಷ್ಮ ಕಿರಣ್ ರೈ ಪ್ರಾರ್ಥನೆ ಹಾಡಿದರು. ಧರ್ಮಸ್ಥಳ ಮೇಳದ ಹಿರಿಯ ಭಾಗವತರಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಜೀರ್ಣೋದ್ಧಾರ ಸಮಿತಿಯ ಕೋಶಾ„ಕಾರಿ ಇ.ಕೃಷ್ಣ ಮೋಹನ ಭಟ್, ಸೇವಾ ಸಮಿತಿಯ ಕಾರ್ಯದರ್ಶಿ ಸರ್ವೇಶ್ ಕುಮಾರ್ ಭಟ್, ಕೂಡ್ಲು ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯ ಶಿಕ್ಷಕಿ ಶ್ರೀಲತಾ ಕೆ. ಶುಭಹಾರೈಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಕೆ.ಮಹಾಬಲ ಶೆಟ್ಟಿ, ಕೋಶಾಧಿಕಾರಿ ಪಿ.ಎಸ್.ನಾರಾಯಣ ಭಟ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಭಟ್, ಕೆ.ಚಂದ್ರಶೇಖರ್ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು. ಶ್ರೀಮತಿ ಟೀಚರ್ ವಂದಿಸಿದರು.

