ಮಂಜೇಶ್ವರ: ದುರ್ಗಿಪಳ್ಳ ಶ್ರೀ ದುರ್ಗಾಪರಮೇಶ್ವರೀ ಕ್ಷೇತದ ನಿಧಿಕುಂಭ ಸಂಚಯನ ಉದ್ಘಾಟನಾ ಕಾರ್ಯಕ್ರಮ ಹಾಗೂ ಶ್ರಿ ದುರ್ಗಾಪರಮೇಶ್ವರೀ ಮಾತೆಯ ವಿಗ್ರಹ ಪ್ರತಿಷ್ಠಾಪನಾ ಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಮಂಗಳವಾರ ಬೆಳಿಗ್ಗೆ ಕದ್ರಿ ಕ್ಷೇತ್ರದಲ್ಲಿ ನಡೆಯಿತು.
ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಆಶೀರ್ವಚನ ನೀಡಿದರು. ಉದ್ಯಾವರ ಮಾಡ ಶ್ರೀ ಅರಸು ಮಂಜಿಷ್ಣಾರು ಕ್ಷೇತ್ರದ ಮೊಕ್ತೇಸರ ಮೋಹನ್ ಶೆಟ್ಟಿ ತೂಮಿನಾಡು ನಿಧಿಕುಂಭ ಸಂಚಯನಕ್ಕೆ ಚಾಲನೆ ನೀಡಿ ಉದ್ಘಾಟಿಸಿದರು. ಶ್ರೀ ದುರ್ಗಾ ಪರಮೇಶ್ವರೀ ಕ್ಷೇತ್ರದ ಅಧ್ಯಕ್ಷ ನ್ಯಾಯವಾದಿ ನವೀನ್ ರಾಜ್ ಕೆ.ಜೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉದ್ಯಾವರ ಮಾಡ ಶ್ರೀ ಅರಸು ಮಂಜಿಷ್ಣಾರು ದೈವ ಕ್ಷೇತ್ರದ ಅಣ್ಣ ದೈವದ ಪಾತ್ರಿ ರಾಜ ಬೆಳ್ಚಾಪ್ಪಾಡ, ಬಿ.ಟಿ.ಎಸ್. ಬೆಂಗಳೂರು ಉದ್ಯಮಿ ಕೆ. ನಾರಾಯಣ, ಯೋಗಾಚಾರ್ಯ ಪುಂಡರಿಕಾಕ್ಷ ಬೆಳ್ಳೂರು, ಮೀಂಜ ಗ್ರಾಮ ಪಂಚಾಯತಿ ಸದಸ್ಯೆ ಶ್ವೇತಾ ಬಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದು ಶುಭಾಶಂಸನೆಗೈದರು. ಕ್ಷೇತ್ರದ ಪ್ರಧಾನ ಅರ್ಚಕ ಧರ್ಮೆಂದ್ರ ಆಚಾರ್ಯ ಮಧೂರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯದರ್ಶಿ ಕಿಶನ್ ಕಣ್ವತೀರ್ಥ ವಂದಿಸಿದರು.


