ಪೆರ್ಲ: ಪೆರ್ಲ ನಾಲಂದ ಮಹಾವಿದ್ಯಾಲಯ, ಕ್ಯಾಂಪೆÇ್ಕೀ ಲಿಮಿಟೆಡ್ ಮಂಗಳೂರು ಮತ್ತು ಊರಿನ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಫೆ.8 ರಂದು ವಿಚಾರ ಸಂಕಿರಣ ಹಾಗೂ ವಸ್ತು ಪ್ರದರ್ಶನವನ್ನು ಒಳಗೊಂಡ ಬೃಹತ್ 'ಕೃಷಿ ಮೇಳ' ಪೆರ್ಲದ ನಾಲಂದ ಕಾಲೇಜು ಪರಿಸರದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರಗಿತು.
ನಾಲಂದ ಕಾಲೇಜು ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ, ಆಡಳಿತ ಮಂಡಳಿಯ ಅಧ್ಯಕ್ಷ ಆನೆಮಜಲು ವಿಷ್ಣು ಭಟ್, ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಜಯಗೋವಿಂದ ಉಕ್ಕಿನಡ್ಕ, ಕಜಂಪಾಡಿ ಸುಬ್ರಮಣ್ಯ ಭಟ್, ನಾರಾಯಣ ರಾವ್ ಉಪಸ್ಥಿತರಿದ್ದರು.


