ಬದಿಯಡ್ಕ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ವತಿಯಿಂದ ಇಬ್ಬರು ಸಾಧಕ ಶಿಕ್ಷಕರನ್ನು ಅಭಿನಂದಿಸಲಾಯಿತು. ಪೆರಡಾಲ ನವಜೀವನ ಪ್ರೌಢಶಾಲೆಯಲ್ಲಿ ಕಾರ್ಯಕ್ರಮವು ನಡೆಯಿತು. ಕೇಂದ್ರ ಸಮಿತಿಯ ಅಧ್ಯಕ್ಷ ರವೀಂದ್ರನಾಥ ಕೆ ಆರ್ ಅವರು ಸಾಧಕರನ್ನು ಅಭಿನಂದಿಸಿದರು. ಕುಂಬಳೆ ಉಪಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಣ್ಣೂರು ವಿಶ್ವವಿದ್ಯಾಲಯದಲ್ಲಿ ಡಾ.ಉಪ್ಪಂಗಳ ಶಂಕರನಾರಾಯಣ ಭಟ್ ಮಾರ್ಗದರ್ಶನದಲ್ಲಿ ಯಕ್ಷಗಾನ ಭಾಗವತಿಕೆಯ ತೌಲನಿಕ ಅಧ್ಯಯನ ನಡೆಸಿ ಪಿಎಚ್ ಡಿ ಪದವಿ ಪಡೆದ ಪೆರ್ಲ ಸತ್ಯನಾರಾಯಣ ಪ್ರೌಢಶಾಲಾ ಶಿಕ್ಷಕ ಡಾ.ಸತೀಶ ಪುಣಿಚಿತ್ತಾಯ ಅವರನ್ನು ಅಭಿನಂದಿಸಲಾಯಿತು.
ಅಲ್ಲದೆ ಶಿಕ್ಷಕರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 200ಮೀ ಓಟಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಪಣಿಯೆ ಎ ಎಲ್ ಪಿ ಶಾಲಾ ಶಿಕ್ಷಕಿ ಸವಿತಾ ಟೀಚರ್ ಅವರನ್ನೂ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶ್ಯಾಮ ಪ್ರಸಾದ್, ಪ್ರಭಾವತಿ ಕೆದಿಲಾಯ ಪುಂಡೂರು ಉಪಸ್ಥಿತರಿದ್ದರು. ಸುರೇಖ ಟೀಚರ್ ಸ್ವಾಗತಿಸಿ, ಶರತ್ ಕುಮಾರ್ ವಂದಿಸಿದರು. ಪ್ರದೀಪ ಕುಮಾರ್ ಶೆಟ್ಟಿ ನಿರೂಪಿಸಿದರು.



