ಬದಿಯಡ್ಕ: ನಮ್ಮ ವೃತ್ತಿಯ ಬಗ್ಗೆ ಗೌರವವನ್ನಿಟ್ಟುಕೊಂಡು ಸಂಘಟನಾತ್ಮಕವಾಗಿ ನಾವು ಒಂದುಗೂಡಿದರೆ ಭವಿಷ್ಯವಿದೆ. ಎಲ್ಲರ ಒಗ್ಗಟ್ಟಿನ ಪರಿಶ್ರಮ, ಸಹಕಾರವಿದ್ದರೆ ಮಾತ್ರ ನಮ್ಮ ವೃತ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಿದೆ. ಸದಾ ಸಂಘಟಿತರಾಗಿ ಮುಂದುವರಿಯೋಣ ಎಂದು ಕೆ.ಎಸ್.ಟಿ.ಎ.ಜಿಲ್ಲಾ ಅಧ್ಯಕ್ಷ ಮೋಹನ್ ದಾಸ್ ಕುಂಬಳೆ ಹೇಳಿದರು.
ಇತ್ತೀಚೆಗೆ ಬದಿಯಡ್ಕ ಸಂಸ್ಕøತಿ ಭವನದಲ್ಲಿ ನಡೆದ ಕೇರಳ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಬದಿಯಡ್ಕ ಘಟಕದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬದಿಯಡ್ಕ ಘಟಕದ ಅಧ್ಯಕ್ಷ ಪ್ರಜ್ವಲ್ ಗೋಪಾಲಕೃಷ್ಣ ಪ್ರಸಾದ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕೆ.ಎಸ್.ಟಿ.ಎ.ಮಂಜೇಶ್ವರ ತಾಲೂಕು ಅಧ್ಯಕ್ಷ ಸಂಕಪ್ಪ ಗಟ್ಟಿ ಕುಂಬಳೆ, ಪ್ರಧಾನ ಕಾರ್ಯದರ್ಶಿ ಸತೀಶ್ ಆಚಾರ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸಂಘಟನೆಯ ಕುರಿತು ಮಾತನಾಡಿದರು. ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ್ ಸಿ. ಉಪಸ್ಥಿತರಿದ್ದರು. ಬದಿಯಡ್ಕ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಘಟಕದ ಸದಸ್ಯೆ ಮಾಲತಿ ಕೆ. ವಂದಿಸಿದರು.





