HEALTH TIPS

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

                   
       ಜಮ್ಮು: ಜಮ್ಮು ಮತ್ತು ಕಾಶ್ಮೀರದ ತ್ರಾಲ್ ನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆರುಳುಸಿದೆ.
    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ನಲ್ಲಿ ಉಗ್ರರು ಅಡಗಿ ಕುಳಿತಿರುವ ವಿಚಾರ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆ ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಇದರಂತೆ ದಕ್ಷಿಣ ಕಾಶ್ಮೀರದ ಗುಲ್ಶಾನ್ಪೊರ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ.
     ಸೋಪಿಯಾನ್ ಜಿಲ್ಲೆಯ ನರ್ಬಾಲ್ ಒಮ್ಪೊರಾ ಪ್ರದೇಶದಲ್ಲಿ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿರುವ ಸೇನಾಪಡೆ, ಶಸ್ತ್ರಾಸ್ತ್ರಗಳು ಹಾಗೂ ಕೆಲ ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries