ಕಾಸರಗೋಡು: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀ ವರದರಾಜ ವೆಂಕಟರಮಣ ದೇವಸ್ಥಾನಕ್ಕೆ ಫೆಬ್ರವರಿ 4 ರಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ಶ್ರೀ ವಿದ್ಯಾಧಿರಾಜ ಶ್ರೀಪಾದ ಒಡೆಯರ್ ಸ್ವಾಮೀಜಿ ಹಾಗೂ ಅವರ ಪಟ್ಟ ಶಿಷ್ಯ ಶ್ರೀಮದ್ ಶ್ರೀ ವಿದ್ಯಾಧೀಶ ಶ್ರೀಪಾದ ಒಡೆಯರ್ ಸ್ವಾಮೀಜಿ ಚಿತ್ತೈಸಲಿರುವರು.
ಶ್ರೀಗಳು ಶಿಷ್ಯ ಸ್ವೀಕಾರದ ಬಳಿಕ ದೇಗುಲಕ್ಕೆ ಪ್ರಥಮ ಬಾರಿಗೆ ಆಗಮಿಸುತ್ತಿದ್ದು ಫೆಬ್ರವರಿ 10 ರ ವರೆಗೆ ಇಲ್ಲಿ ಮೊಕ್ಕಾಂ ಇರುವರು.


