ಪೆರ್ಲ:ಸ್ವರ್ಗ ಸ್ವಾಮೀ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿವೇಕಾನಂದ ಜಯಂತಿ, ಶಾಲಾ ವಾರ್ಷಿಕೋತ್ಸವ ಮತ್ತು ಹೆತ್ತವರ ದಿನಾಚರಣೆ ಸಮಾರಂಭದಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮಾ ಅವರ 'ಪ್ರಣತಿ' ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.
ಸ್ವರ್ಗ ಶಾಲಾ ವ್ಯವಸ್ಥಾಪಕ ಹೃಷಿಕೇಶ ವಿ.ಎಸ್.ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದ ಡಾ.ಮೋಹನಕುಮಾರ್ ವೈ.ಎಸ್ ಮತ್ತು ಡಾ.ಸತೀಶ್ ಪುಣಿಂಚಿತ್ತಾಯ ಅವರಿಗೆ ಸಂಕಲನ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು.




