ಮಂಜೇಶ್ವರ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬ್ರಹ್ಮಕಲಶೋತ್ಸವ ನಿಮಿತ್ತ ಕೋಟಿ ಜಪ ಯಜ್ಞ ಸಂಕಲ್ಪ ಹಾಗೂ ಚಿಗುರುಪಾದೆ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇತ್ತೀಚೆಗೆ ಶ್ರೀಕ್ಷೇತ್ರ ಚಿಗುರುಪಾದೆಯಲ್ಲಿ ಜರಗಿತು. ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದ ಸಮಾರಂಭದಲ್ಲಿ ವೇದಮೂರ್ತಿ ಹರಿನಾರಾಯಣ ಮಯ್ಯ ಬಜೆ ಕುಂಬಳೆ ಅವರು ಭಕ್ತಾದಿಗಳಿಗೆ ಜಪ ಉಪದೇಶಿಸಿದರು.
ಆಮಂತ್ರಣ ಬಿಡುಗಡೆ ಸಮಾರಂಭದಲ್ಲಿ ಶ್ರೀ ಮಹಾಲಿಂಗೇಶ್ವರ ಟ್ರಸ್ಟ್‍ನ ಅಧ್ಯಕ್ಷೆ ಪ್ರೇಮಾ ಕೆ ಭಟ್ ತೊಟ್ಟೆತ್ತೋಡಿ, ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ವಸಂತ ಭಟ್ ತೊಟ್ಟೆತ್ತೋಡಿ, ಉತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಎಂ.ಐ.ಎಂ, ನಾರಾಯಣ ನಾೈಕ್ ನಡುಹಿತ್ಲು, ಸೇವಾಟ್ರಸ್ಟ್ ಕಾರ್ಯದರ್ಶಿ ಶ್ರೀಧರ ರಾವ್ ಆರ್ ಎಂ, ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಸೇವಾಸಮಿತಿ ಜೊತೆ ಕಾರ್ಯದರ್ಶಿ ಅರವಿಂದಾಕ್ಷ ಭಂಡಾರಿ ದಡ್ಡಂಗಡಿ ಉಪಸ್ಥಿತರಿದ್ದರು. ಅರವಿಂದಾಕ್ಷ ಭಂಡಾರಿ ದಡ್ಡಂಗಡಿ ಸಮಾರಂಭ ನಿರ್ವಹಿಸಿದರು.




