ಮಂಜೇಶ್ವರ: ಮಜಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಇತ್ತೀಚೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಮೀಂಜ ಗ್ರಾಮ ಪಂಚಾಯತಿ ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿ ಸಮಿತಿಯ ಅಧ್ಯಕ್ಷ ಕೃಷ್ಣ.ಕೆ ಧ್ವಜಾರೋಹಣಗೈದರು. ಗ್ರಾ.ಪಂ.ಸದಸ್ಯ ಶಾಂತರಾಮ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಶಾದ್ ಶುಕೂರ್ ಉದ್ಘಾಟಿಸಿದರು. ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್.ವಿ, ಮಂಜೇಶ್ವರ ಬಿ.ಆರ್.ಸಿ ಯ ಕ್ಷೇತ್ರ ನಿರೂಪಣಾಧಿಕಾರಿ ಗುರುಪ್ರಸಾದ್ ರೈ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ, ನಿವೃತ್ತ ಮುಖ್ಯೋಪಾಧ್ಯಾಯ ಶಿವ ಶೆಟ್ಟಿ ಮಜಿಬೈಲು, ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ಗೋಪಾಕೃಷ್ಣ ನಾವಡ, ಹಳೆ ವಿದ್ಯಾರ್ಥಿ ಸಂಘದ ಆಧ್ಯಕ್ಷ ಹರೀಶ್ ನಾಯಕ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಶಾಲಾ ಮಾತೃ ಸಂಘದ ಅಧ್ಯಕ್ಷೆ ನಿರ್ಮಲ ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಮಹಿಳಾ ಹರಿಕಥಾ ಕಣ್ಮನಿ ವಿಜಯಲಕ್ಷ್ಮಿ ಅಡಿಗ ಹಾಗು ಉದಯೋನ್ಮುಖ ಚಿತ್ರ ಕಲಾವಿದ ಶರತ್ ಕೊಡ್ಡೆಯವರನ್ನು ಅಭಿನಂದಿಸಲಾಯಿತು. ನಿವೃತ್ತ ಮುಖ್ಯೋಪಾಧ್ಯಾಯ ಜಯಶಂಕರ ವಿ.ಜಿ ಯವರನ್ನು ಗೌರವಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಬಂಗೇರ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ವರದಿ ವಾಚಿಸಿದರು. ಶಿಕ್ಷಕ ದೇವಾನಂದ ಕಾಡೂರು ವಂದಿಸಿದರು. ಹಿರಿಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ನಿರ್ವಹಿಸಿದರು. ಶಾಲಾ ಮಕ್ಕಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.


