ಎರ್ನಾಕುಳಂ: ಚೈನಾದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ 'ಕೊರೊಣಾ ವೈರಸ್'ಹಿನ್ನೆಲೆಯಲ್ಲಿ ಕೊಚ್ಚಿಯ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ಎಲ್ಲ ಪ್ರಯಾಣಿಕರನ್ನು ಬಿಗುವಿನ ತಪಾಸಣೆ ನಡೆಸಲಾಗುತ್ತಿದೆ. ಕೇಂದ್ರ ಆರೋಗ್ಯ ಮತ್ತು ವ್ಯೋಮಯಾನ ಸಚಿವಾಲಯದ ನಿರ್ದೇಶಾನುಸಾರ, ನಿಲ್ದಾಣದಲ್ಲಿ ಪ್ರತ್ಯೇಕ ಆರೋಗ್ಯ ತಪಾಸಣಾ ಕೌಂಟರ್ ತೆರೆಯಲಾಗಿದೆ.
ವೈರಸ್ ವ್ಯಾಪಿಸುತ್ತಿರುವುದಾಗಿ ಸಂಶಯಿಸಲಾಗುವ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಪ್ರತ್ಯೇಕ ತಪಾಸಣೆ ನಡೆಸುವುದರ ಜತೆಗೆ ಅವರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ರೋಗಬಾಧೆ ಪತ್ತೆಯಾದಲ್ಲಿ ಅವರನ್ನು ಕೊಚ್ಚಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವ್ಯವಸ್ಥೆಯನ್ನೂ ಸಜ್ಜುಗೊಳಿಸಲಾಗಿದೆ. ಅಗತ್ಯಬಿದ್ದಲ್ಲಿ ಪ್ರತ್ಯೇಕ ವಾರ್ಡುಗಳನ್ನೂ ಆಸ್ಪತ್ರೆಯಲ್ಲಿ ಸಜ್ಜುಗೊಳಿಸಲಾಗಿದೆ. ಆರೋಗ್ಯಿಲಾಖೆ ಕಾರ್ಯಕರ್ತರಿಗಾಗಿ ಪ್ರತ್ಯೇಕ ಮಾಸ್ಕ್ ಹಾಗೂ ಕೈಗವಚ ವಿತರಿಸಲಾಗಿದೆ. ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರಲ್ಲಿ 28ಮಂದಿಯನ್ನು ಸಂಶಯದ ಆಧಾರದಲ್ಲಿ ತಪಾಸಣೆಗೆ ಒಳಪಡಿಸಿದ್ದರೂ, ಯಾರಲ್ಲೂ ವೈರಸ್‍ಪತ್ತೆಯಾಗಿರಲಿಲ್ಲ. ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳಲ್ಲೂ ತಪಾಸಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.


