ಮುಳ್ಳೇರಿಯ: ನಾವು ಯಾವುದೇ ಕೆಲಸವನ್ನು ಮಾಡಲು ನಿರ್ಧರಿಸಿದ್ದರೂ ಭಗವಂತನ ಅನುಗ್ರಹಬೇಕು. ಮನುಷ್ಯ ಮಾಡಿದ ಯಾವುದೇ ಕರ್ಮದ ಪೂರ್ಣಫಲ ಭಗವಂತನ ಸಂಕಲ್ಪದಂತೆ ಮಾತ್ರಾ ನಡೆಯುತ್ತದೆ ಎಂದು ಎಡನೀರು ಮಠದ ಪರಮಪೂಜ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರು ಹೇಳಿದರು.
ಅವರು ಗುರುವಾರ ಕುಂಟಾರು ಶ್ರೀ ಮಹಾವಿಷ್ಣುಮೂರ್ತಿ ಕ್ಷೇತ್ರ ಪರಿಸರದಲ್ಲಿ ನಿರ್ಮಾಣಗೊಳ್ಳಲಿರುವ ಕುಂಟಾರು ಮಂತ್ರಶಾಲೆಯ ಶಂಕುಸ್ಥಾಪನೆಯನ್ನು ನೆರವೇರಿಸಿ ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಶ್ರೀಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಪದ್ಮನಾಭ ಭಟ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರದ ಆಡಳಿತೆ ಮೊಕ್ತೇಸರ ಬ್ರಹ್ಮಶ್ರೀ ವಾಸುದೇವ ತಂತ್ರಿ, ಡಾ.ಯು.ಬಿ.ಕುಣಿಕುಳ್ಳಾಯ ಉಪಸ್ಥಿತರಿದ್ದರು.
ಬ್ರಹ್ಮಶ್ರೀ ರವೀಶ ತಂತ್ರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಯತೀಶ್.ಎಚ್ ವಂದಿಸಿದರು. ಪ್ರಕಾಶ್ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.



