ಕಾಸರಗೋಡು: ಪೆರಿಯಾದಲ್ಲಿರುವ ಕೇರಳ ಕೇಂದ್ರಿಯ ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದಲ್ಲಿ ಖಾಲಿ ಇರುವ 2 ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯ ಜಾಲತಾಣದಲ್ಲಿ ಪ್ರಕಟಿಸಿರುವ ಶೈಕ್ಷಣಿಕ ಅರ್ಹತೆಗಳಿಗೆ ಸಂಬಂಧಿಸಿದ ಎಲ್ಲ ಪ್ರಮಾಣಪತ್ರಗಳೊಂದಿಗೆ ಜ.13 ಸೋಮವಾರದಂದು ಮಧ್ಯಾಹ್ನ 2 ಗಂಟೆಗೆ ಕೇಂದ್ರೀಯ ವಿಶ್ವ ವಿದ್ಯಾನಿಲಯ, ತೇಜಸ್ವಿನಿ ಹಿಲ್ಸ್, ಪೆರಿಯಾ ಕಾಸರಗೋಡು ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕಾಗಿ ಕೋರಲಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಪ್ರತಿ ತರಗತಿಗೆ ರೂ.1,000ದಂತೆ, ಒಟ್ಟು ಮಾಸಿಕ ರೂ.25,0000 ಮೀರದಂತೆ, ಗೌರವ ಸಂಭಾವನೆಯನ್ನು ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.




