ಕಾಸರಗೋಡು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಠರಾವು ಮಂಡನೆಗೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ನಿರಂತರವಾಗಿ ಪ್ರಾದೇಶಿಕ ಆಡಳಿತ ಸಮಿತಿಗಳಲ್ಲಿನ ಬಹುಮತದ ಹಿನ್ನೆಲೆಯಲ್ಲಿ ಸಂವಿಧಾನವನ್ನು ಉಲ್ಲಂಘಿಸಿ ಠರಾವು ಮಂಡಿಸುವ ಪ್ರಕ್ರಿಯೆಗೆ ಕೇರಳ ಹೈಕೋರ್ಟ್ ತಿರುಗೇಟು ನೀಡಿದೆ ಎಂದು ಬಿಜೆಪಿ ಹೇಳಿದೆ. ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ ನ್ಯಾಯವಾದಿ ಕೆ.ಶ್ರೀಕಾಂತ್ ಠರಾವು ವಿರುದ್ಧ ಹೈಕೋರ್ಟ್ ಮೆಟ್ಟಲೇರಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

