ಮಂಜೇಶ್ವರ: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನ ಜ್ಯುಬಿಲಿ ಸ್ಮಾರಕ ಕಟ್ಟಡದ ಉದ್ಘಾಟನೆ ನಾಳೆ(ಜ.17) ರಂದು ಜರಗಲಿದೆ. ಕಾಲೇಜಿನ ಭೌತಿಕ ಹಿನ್ನೆಲೆ ಸುಧಾರಿತಗೊಳಿಸುವ ನಿಟ್ಟಿನಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ಹಿಂದಿನ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ಶಿಲಾನ್ಯಾಸ ನಡೆಸಿದ್ದರು. ಈ ಕಾಲೇಜಿನಲ್ಲಿ ನಾಲ್ಕು ಪದವಿ ತರಬೇತಿಗಳೂ, ಎರಡು ಸ್ನಾತಕೋತ್ತರ ಪವಿಗಳೂ ಇವೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್ ಕಟ್ಟಡ ಉದ್ಘಾಟಿಸುವರು. ಶಾಸಕ ಎಂ.ಸಿ.ಖಮರುದ್ದೀನ್ ಅಧ್ಯಕ್ಷತೆ ವಹಿಸುವರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಕಣ್ಣೂರು ವಿವಿ ಉಪಕುಲಪತಿ ಡಾ.ಗೋಪಿನಾಥ್ ರವೀಂದ್ರನ್ ಮುಖ್ಯ ಅತಿಥಿಯಾಗಿರುವರು. ಜಿಲ್ಲಾ ಪಂಚಾಯತಿ ಅಧ್ಯಕ್ಷ ಎ.ಜಿ.ಸಿ.ಬಶೀರ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷ ಎ.ಕೆ.ಎಂ.ಅಶ್ರಫ್ ಮೊದಲಾದವರು ಉಪಸ್ಥಿತರಿರುವರು.


