ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತಿ ಮಟ್ಟದ ಗಣಿತೋತ್ಸವ ಶ್ರೀವಾಣೀ ವಿಜಯ ಎ.ಯು.ಪಿ.ಶಾಲೆಯಲ್ಲಿ ಜರಗಿತು.
ಪಂಚಾಯತಿ ಮಟ್ಟದ ಶಾಲಾ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ಆರಂಭಗೊಂಡ ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯ ಗೋಪಾಲಕೃಷ್ಣ ಪಜ್ವ ಅಧ್ಯಕ್ಷತೆ ವಹಿಸಿದರು. ವರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಅಬ್ದುಲ್ ಮಜೀದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸದಸ್ಯರಾದ ಗೀತಾ ಸಾಮಾನಿ, ಭಾರತಿ ಮೊದಲಾದವರು ಶುಭಹಾರೈಸಿದರು.
ಮಂಜೇಶ್ವರ ಬ್ಲಾಕ್ ಸಂಪನ್ಮೂಲ ಕೇಂದ್ರದ ನಿರೂಪಣಾಧಿಕಾರಿ ಗುರುಪ್ರಸಾದ್ ರೈ, ಪಿ.ಇ.ಸಿ. ಕಾರ್ಯದರ್ಶಿ ಪದ್ಮನಾಭ ಎಂ. ಮುಖ್ಯ ಅತಿಥಿಯಾಗಿದ್ದರು. ವರ್ಕಾಡಿ ಪಂಚಾಯತಿ ಮಟ್ಟದ ಶಾಲೆಗಳ ಮುಖ್ಯ ಶಿಕ್ಷಕರು ಹಾಗು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಾಂತಮಜಲ್ ಉಪಸ್ಥಿತರಿದ್ದರು. ಆಂಧ್ರ ಪ್ರದೇಶದ ಮಚೀಲಿಪಟ್ಟಣದಲ್ಲಿ ಜರಗಿದ ಕಬ್ ಬುಲ್ ಬುಲ್ ಉತ್ಸವದಲ್ಲಿ ಪಾಲ್ಗೊಂಡು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಸರಳ ಸ್ವಾಗತಿಸಿ, ಶಿಕ್ಷಕಿ ಅನಸೂಯ ವಂದಿಸಿದರು. ಶಿಕ್ಷಕ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳು ನಡೆಸಿಕೊಟ್ಟರು.