ಕಾಸರಗೋಡು: "ನಾಳಿನ ಕೇರಳ ಮಾದಕ ಪದಾರ್ಥ ರಹಿತ ಕೇರಳ" ಎಂಬ ಸಂದೇಶದೊಂದಿಗೆ ಗುರುವಾರ ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಮಾದಕ ಪದಾರ್ಥ ಬಳಕೆ ವಿರುದ್ಧ ಪ್ರತಿಜ್ಞೆ ಸ್ವೀಕಾರ ನಡೆಸಲಾಯಿತು.
ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಾಯಕ ಜಿಲ್ಲಾಧಿಕಾರಿ ಪಿ.ಆರ್.ರಧಿಕಾ ಅವರು ಪ್ರತಿಜ್ಞೆ ಸ್ವೀಕಾರಕ್ಕೆ ನೇತೃತ್ವ ವಹಿಸಿದ್ದರು. ಜಿಲ್ಲಾ ಹಣಕಾಸು ಅಧಿಕಾರಿ ಕೆ.ಸತೀಶನ್, ಜಿಲ್ಲಾ ಕಾನೂನು ಅಧಿಕಾರಿ ಕೆ.ಪಿ.ಉಣ್ಣಿಕೃಷ್ಣನ್ ಮೊದಲಾದವರು ಉಪಸ್ಥಿತರಿದ್ದರು. ಸಿವಿಲ್ ಸ್ಟೇಷನ್ ಸಭಾಂಗಣದಲ್ಲಿ ನಡೆದ ಸಮಾರಮಭದಲ್ಲಿ ಪಿ.ಎ.ಯು.ಪ್ರಾಜೆಕ್ಟ್ ನಿರ್ದೇಶಕ ಕೆ.ಪ್ರದೀಪನ್ ನೇತೃತ್ವ ವಹಿಸಿದ್ದರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ತ್ರಿಸ್ತರ ಪಂಚಾಯತ್ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.


