HEALTH TIPS

ಕೋವಿಡ್ 19-ಕಾಸರಗೋಡು: ಮತ್ತೆ 17 ಪ್ರಕರಣ ದೃಢ


        ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ ಮತ್ತೆ 17 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಕೇರಳ ರಾಜ್ಯದಲ್ಲಿ ಒಟ್ಟು 32 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢೀಕರಿಸಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 234 ಕ್ಕೇರಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 106 ಕ್ಕೇರಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುವನಂತಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
        ಸೋಮವಾರ ಕಣ್ಣೂರು ಜಿಲ್ಲೆಯಲ್ಲಿ 11, ವಯನಾಡು ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ತಲಾ ಎರಡರಂತೆಯೂ, ಕಾಸರಗೋಡಿನಲ್ಲಿ 17 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಡಿಸಲಾಗಿದೆ. ಮಾ.30 ರಂದು ರಾಜ್ಯದಲ್ಲಿ 126 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದೇಶದಿಂದ ಬಂದ 17 ಮಂದಿಗೆ ಮತ್ತು ಕೊರೊನಾ ವೈರಸ್ ಸೋಂಕಿತರೊಂದಿಗಿನ ಸಂಪರ್ಕದಿಂದ 15 ಮಂದಿಗೆ ಕೊರೊನಾ ವೈರಸ್ ಸೋಂಕು ಬಾಧಿಸಿದೆ. 
     ಕೊರೊನಾ ವೈರಸ್ ಸಂಬಂಧಿಸಿ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳ ಸುದ್ದಿ ಮತ್ತು ಅಪಪ್ರಚಾರ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದು, ಅನ್ಯರಾಜ್ಯಗಳ ಕಾರ್ಮಿಕರಿಗೆ ವಸತಿ ಸೌಕರ್ಯ ಕಲ್ಪಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
       10 ಕೇಸುಗಳ ದಾಖಲು : ಲಾಕ್ ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 10 ಕೇಸುಗಳು ದಾಖಲಾಗಿವೆ. 8 ಮಂದಿಯನ್ನು ಬಂ„ಸಿಲಾಗಿದ್ದು, 5 ವಾಹನಗಳನ್ನು ವಶಪಡಿಸಲಾಗಿದೆ. ಕಾಸರಗೋಡು ನಗರ ಠಾಣೆಯಲ್ಲಿ 1, ಕುಂಬಳೆ-1, ವೆಳ್ಳರಿಕುಂಡ್-1, ಬೇಡಗಂ-1, ಬೇಕಲದಲ್ಲಿ-2, ಅಂಬಲತ್ತರ-1, ನೀಲೇಶ್ವರ-1, ರಾಜಪುರಂ ಠಾಣೆಯಲ್ಲಿ 1 ಕೇಸುಗಳನ್ನು ದಾಖಲಿಸಲಾಗಿದೆ. ಈ ವರೆಗೆ ಜಿಲ್ಲೆಯಲ್ಲಿ ಈ ಪ್ರಕರಣಗಳಿಗೆ ಸಂಬಂ„ಸಿ ಒಟ್ಟು 200 ಕೇಸುಗಳನ್ನು ದಾಖಲಿಸಲಾಗಿದೆ. 242 ಮಂದಿಯನ್ನು ಬಂ„ಸಲಾಗಿದೆ. 129 ವಾಹನಗಳನ್ನು ವಶಪಡಿಸಲಾಗಿದೆ.
           ಕೊರೋನಾ ನಿಯಂತ್ರಣ: ಪ್ರತಿದಿನ ಸಭೆ: 
     ಕೋವಿಡ್ 19 ಸೋಂಕು ಪ್ರತಿರೊಧ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿದಿನ ಸಭೆ ನಡೆಯಲಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಪ್ರತಿರೋಧ ಚಟುವಟಿಕೆಗಳ ಅವಲೋಕನ ನಡೆಸುವ ನಿಟ್ಟಿನಲ್ಲಿ ವಿಶೇಷ ಅಧಿಕಾರಿಯಾಗಿರುವ ರಾಜ್ಯ ಉದ್ದಿಮೆ ಇಲಾಖೆ ಕಾರ್ಯದರ್ಶಿ ಅಲ್‍ಕೇಷ್ ಕುಮಾರ್ ಶರ್ಮ ಅವರ ಅಧ್ಯಕ್ಷತೆಯಲ್ಲಿ ಪ್ರತಿದಿನ ಸಂಜೆ 4 ಗಂಟೆಗೆ ಸಭೆ ಜರುಗುವುದು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಜಿಲ್ಲಾ ಮಟ್ಟದ ಸಿಬ್ಬಂದಿ, ಕೋರ್ ಸಮಿತಿ ಸದಸ್ಯರು ಭಾಗವಹಿಸುವರು.
        ಪಿಎಸ್‍ಸಿ ರ್ಯಾಂಕ್ ಮೂರು ತಿಂಗಳು ವಿಸ್ತರಣೆ : ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಲಾವ„ ಮುಗಿದ ಪಿ.ಎಸ್.ಸಿ. ರ್ಯಾಂಕ್ ಯಾದಿಯನ್ನು ಇನ್ನೂ ಮೂರು ತಿಂಗಳಿಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
       ರಾಜ್ಯದಲ್ಲಿ ಕಳೆಯುತ್ತಿರುವ ಅನ್ಯರಾಜ್ಯದ ಕಾರ್ಮಿಕರಿಗೆ ಆಹಾರದ ವ್ಯವಸ್ಥೆ ಮಾಡಲಾಗುವುದು. ಅವರಿಗೆ ಕೇರಳದ ಆಹಾರ ಒಗ್ಗುವುದಿಲ್ಲ. ಆದುದರಿಂದ ಅವರಿಗೆ ಅವರದ್ದೇ ಶೈಲಿಯ ಆಹಾರವನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ ಮುಖ್ಯಮಂತ್ರಿಗಳು ಅನ್ಯ ರಾಜ್ಯಗಳ ಕಾರ್ಮಿಕರ ಕ್ಷೇಮ ಖಾತರಿಪಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries