HEALTH TIPS

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಲೀಟರ್‍ಗೆ 3 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ

 
       ನವದೆಹಲಿ: ಕೋವಿಡ್ -19 ಮಹಾಮಾರಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುವ ನಡುವೆಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ.
    ಪ್ರತಿ ಲೀಟರ್‍ಗೆ 3 ರೂ. ಅಬಕಾರಿ ಸುಂಕ ಹೆಚ್ಚಿಸಲಾಗಿದೆ ತಿಳಿಸಿದೆ. ಅದೇ ರೀತಿ ಪೆಟ್ರೋಲ್ ಮೇಲೆ ಪ್ರತ್ಯೇಕವಾಗಿ ಅಬಕಾರಿ ಸುಂಕ ವನ್ನು 2 ರೂ ನಿಂದ 8 ರೂ ಮತ್ತು ಡೀಸೆಲ್ ಮೇಲೆ 4 ರೂ.ಗೆ ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಸ್ತೆ ಸೆಸ್ ಕೂಡ ಹೆಚ್ಚಿಸಲಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 1ರೂ ಹಾಗೂ ರೂ. 10 ಹೆಚ್ಚಿಸಲಾಗಿದೆ.ಅಂತರರಾಷ್ಟ್ರೀಯ ತೈಲ ಬೆಲೆಗಳ ಇಳಿಮುಖ ಕಂಡ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
      ದೇಶದ ಆರ್ಥಿಕತೆ ಮಂದಗತಿಯಿಂದ ಹೆಣಗಾಡುತ್ತಿರುವ ನಡುವೆಯೇ ಕೊರೋನಾ ವೈರಸ್ ಪ್ರಭಾವದಿಂದ ಮತ್ತಷ್ಟು ಹದಗೆಡುವ ಸಾಧ್ಯತೆಯ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುವುದರೊಂದಿಗೆ, ಇಂಧನ ಬೆಲೆಗಳು ಸ್ವಲ್ಪಮಟ್ಟಿಗೆ ಏರಿಕೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ 2000 ಕೋಟಿ ಹೆಚ್ಚುವರಿ ಆದಾಯ ಬರಬಹುದು ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries