HEALTH TIPS

ಮಧ್ಯಪ್ರದೇಶ: 48 ಗಂಟೆಯೊಳಗೆ ವಿಶ್ವಾಸ ಮತಯಾಚಿಸುವಂತೆ ಸೂಚಿಸಿ; 'ಸುಪ್ರೀಂ' ಮೆಟ್ಟಿಲೇರಿದ ಬಿಜೆಪಿ, ನಾಳೆ ವಿಚಾರಣೆ

 
          ಭೋಪಾಲ್: ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಅವರು 48 ಗಂಟೆಯೊಳಗೆ ವಿಶ್ವಾಸಮತ ಯಾಚನೆ ಮಾಡುವಂತೆ ಸೂಚಿಸಬೇಕು ಎಂದು ಬಿಜೆಪಿ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
           ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯಾಗಿರುವ ವಿಶ್ವಾಸ ಮತ ಯಾಚನೆ ಇಂದು ನಡೆಯಬೇಕಿತ್ತು. ಆದರೆ ಕೊರೋನಾ ವೈರಸ್ ನೆಪವೊಡ್ಡಿ ಮಧ್ಯ ಪ್ರದೇಶ ವಿಧಾನಸಭೆ ಕಲಾಪವನ್ನು ಮಾರ್ಚ್ 26ಕ್ಕೆ ಸ್ಪೀಕರ್ ಮುಂದೂಡಿದರು. ಸ್ಪೀಕರ್ ಅವರ ಈ ನಿರ್ಧಾರವನ್ನು ಖಂಡಿಸಿರುವ ಬಿಜೆಪಿ 48 ಗಂಟೆಯೊಳಗೆ ವಿಶ್ವಾಸ ಮತ ಯಾಚನೆ ಮಾಡುವಂತೆ ಸಿಎಂ ಕಮಲ್ ನಾಥ್ ಅವರಿಗೆ ಸೂಚಿಸಬೇಕು ಎಂದು ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದೆ.
                 ನಾಳೆ ಬಿಜೆಪಿ ಅರ್ಜಿ ವಿಚಾರಣೆ:
     ವಿಶ್ವಾಸಮತ ಸಾಬೀತು ಮಾಡಲು ಕಮಲ್ ನಾಥ್ ಗೆ 10 ದಿನ ಕಾಲಾವಕಾಶ ದೊರೆತ ಬೆನ್ನಲ್ಲೇ ಬಿಜೆಪಿ ಸುಪ್ರೀಂಕೋರ್ಟ್? ಮೆಟ್ಟಿಲೇರಿದೆ. ಮುಂದಿನ 48 ಗಂಟೆ ಒಳಗೆ ವಿಶ್ವಾಸಮತ ಯಾಚನೆಗೆ ನಿರ್ದೇಶನ ನೀಡಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಶಿವರಾಜ್? ಸಿಂಗ್? ಚೌಹಾಣ್? ಸೇರಿ 9 ಬಿಜೆಪಿ ಶಾಸಕರು ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಶನಿವಾರ ಮಧ್ಯಪ್ರದೇಶದ ರಾಜ್ಯಪಾಲರನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರು, ಸಿಎಂ ಕಮಲನಾಥ್ ಅವರಿಗೆ ಸೋಮವಾರ ಸದನದಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತು ಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು. ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಲಾಲ್?ಜೀ ಟಂಡನ್ ಅವರ ಬಳಿ ಮನವಿ ಮಾಡಿತ್ತು. ಅಂತೆಯೇ ಇಂದು ವಿಶ್ವಾಸ ಮತಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದರೆ, ಅಧಿವೇಶನವನ್ನು ಸ್ಪೀಕರ್? ನರ್ಮದಾ ಪ್ರಸಾದ್ ಪ್ರಜಾಪತಿ ಮುಂದೂಡಿದ್ದಾರೆ. ಈಗ ವಿಶ್ವಾಸಮತಯಾಚನೆ ಮುಂದೂಡಲ್ಪಟ್ಟಿದ್ದು, ಹೀಗಾಗಿ ರಾಜೀನಾಮೆ ನೀಡಿದ 22 ಶಾಸಕರ ಮನವೊಲಿಸಲು ಸಿಎಂ ಕಮಲನಾಥ್? ಮತ್ತು ಅವರ ತಂಡಕ್ಕೆ 10 ದಿನ ಸಮಯಾವಕಾಶ ದೊರೆತಿದೆ.
        230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಪ್ರಸ್ತುತ 228 ಶಾಸಕರಿದ್ದಾರೆ. ಬಹುಮತಕ್ಕೆ 115 ಸ್ಥಾನಗಳ ಅವಶ್ಯಕತೆ ಇದೆ. ಬಿಎಸ್?ಪಿಯ ಇಬ್ಬರು ಶಾಸಕರು, ಸಮಾಜವಾದಿ ಪಕ್ಷದ ಓರ್ವ ಶಾಸಕ ಹಾಗೂ ನಾಲ್ವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 121 ಸದಸ್ಯರ ಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಆದರೆ, ಇದೀಗ ಪಕ್ಷೇತರರು ಸೇರಿದಂತೆ ಕಾಂಗ್ರೆಸ್?ನ 22 ಶಾಸಕರು ರಾಜೀನಾಮೆ ನೀಡಿದ್ದಾರೆ. ಹಾಲಿ ಕಾಂಗ್ರೆಸ್?ನಲ್ಲಿ ಕೇವಲ 92 ಶಾಸಕರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries