ಕಾಸರಗೋಡು: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೊನಾ ಪ್ರತಿರೋಧ ನೆರವಿಗಾಗಿ ಹೆಲ್ಪ್ ಡೆಸ್ಕ್ ಆರಂಭಿಸಲಾಗಿದೆ ಎಂದು ವೈದ್ಯಾಧಿಕಾರಿ ಡಾ.ಎ.ವಿ.ರಾಂದಾಸ್ ಹೇಳಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಹಾಯಕವಾಗಲಿದೆ ಎಂದಿದ್ದಾರೆ. ವಾರ್ಡ್ ಮಟ್ಟದಲ್ಲಿ ಆರೋಗ್ಯ ಜಾಗೃತಿ ಸಮಿತಿಗಳನ್ನು ವಿಪುಲಗೊಳಿಸಲಾಗುವುದು. ಅಪಪ್ರಚಾರ ತಡೆಯಲು ಸೈಬರ್ ತಂಡವನ್ನು ಸೇರ್ಪಡೆಗೊಳಿಸಿ ಮೀಡಿಯಾ ಸರ್ವೆಲೆನ್ಸ್ ವಿಪುಲೀಕರಿಸಲಾಗುವುದು. ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರತಿರೋಧಕ್ಕಾಗಿರುವ 15 ಸಮಿತಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ 203 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 198 ಮಂದಿ ಮನೆಗಳಲ್ಲಿ ನಿಗಾದಲ್ಲಿದ್ದಾರೆ. ಐವರು ಕಾಂಞಂಗಾಡ್‍ನ ಜಿಲ್ಲಾ ಆಸ್ಪತ್ರೆ ಮತ್ತು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲೂ ಅಗತ್ಯದ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಲಾಗಿದೆ.
ಕೊರೊನಾ ಪ್ರತಿರೋಧ ಪ್ರಕ್ರಿಯೆ ಹಾಗೂ ಜಾಗರೂಕತೆ ಸಂಬಂಧ ಮಾ.14 ರಂದು ಅವಲೋಕನ ಸಭೆ ನಡೆಯಲಿದೆ. ಕಂದಾಯ ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು. ಬೆಳಗ್ಗೆ 11 ಗಂಟೆಗೆ ಜಿಲ್ಲಾ„ಕಾರಿ ಕಚೇರಿಯ ಕಾನರೆನ್ಸ್ ಹಾಲ್‍ನಲ್ಲಿ ಸಭೆ ನಡೆಯಲಿದೆ ಎಂದು ಜಿಲ್ಲಾ„ಕಾರಿ ಡಾ|ಡಿ.ಸಜಿತ್‍ಬಾಬು ತಿಳಿಸಿದ್ದಾರೆ. ಜಿಲ್ಲಾ-ಬ್ಲಾಕ್-ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ನಗರಸಭೆಗಳ ಅಧ್ಯಕ್ಷರು, ಜಿಲ್ಲಾ ಮಟ್ಟದ ಅ„ಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.


