ಕುಂಬಳೆ: ವೀರಯೋಧ ಮೇಜರ್ ಸಂದೀಪ್ ಉಣ್ಣಿಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಭಾನುವಾರ ಬೆಂಗಳೂರು ಯಲಹಂಕದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ ಸೀತಾಂಗೋಳಿಯ ಸಂತೋಷ್ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ಸದಸ್ಯರು ಸಂದೀಪ್ ಉಣ್ಣಿಕೃಷ್ಣನ್ ಕುಟುಂಬದವರೊಂದಿಗೆ ಸಮಾಲೋಚನೆ ನಡೆಸಿದರು. ಕಳೆದ ನವೆಂಬರ್ 1 ರಂದು ಸೀತಾಂಗೋಳಿಯಲ್ಲಿ ಸಂತೋಷ್ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ನಿರ್ಮಾಣಕ್ಕೆ ಚಾಲನೆ ನೀಡಲಾದ ಮೇಜರ್ ಸಂದೀಪ್ ಉಣ್ಣಿಕೃಷ್ಣನ್ ಸ್ಮಾರಕ ಕಟ್ಟಡದ ಕಾಮಗಾರಿ ಪೂರ್ತಿಗೊಳ್ಳುತ್ತಿದ್ದು ಮೇ.9 ರಂದು ಲೋಕಾರ್ಪಣೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮೇಜರ್ ಸಂದೀಪ್ ಉಣ್ಣಿಕೃಷ್ಣನ್ ಅವರ ತಂದೆ ಉಣ್ಣಿಕೃಷ್ಣನ್,ತಾಯಿಯವರನ್ನು ಆಹ್ವಾನಿಸಲಾಯಿತು.
ಈ ಸಂದರ್ಭ ಸಂತೋಷ್ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ನ್ಯಾಯವಾದಿ ಥೋಮಸ್ ಡಿಸೋಜ, ಖಜಾಂಜಿ ಪ್ರಸಾದ್ ಬಿ., ಸದಸ್ಯರಾದ ಅರುಣ್, ಧನಂಜಯ, ಶೋಭಿತ್ ಕಿರಣ್, ಭರತ್, ಎಂ.ಎಸ್.ಮಧು ಉಪಸ್ಥಿತರಿದ್ದು ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿ ಕಟ್ಟಡ ಉದ್ಘಾಟನೆಗೆ ಆಹ್ವಾನಿಸಿದರು.


