ಕಾಸರಗೋಡು: ಸರೋವರ ಕ್ಷೇತ್ರ ಶ್ರೀ ಅನಂತಪುರ ಅನಂತಪದ್ಮನಾಭ ದೇವಾಲಯ ಪರಿಸರದಲ್ಲಿ ಮೇ 1 ರಿಂದ 3ರ ವರೆಗೆ ನಡೆಯಲಿರುವ ರಾಷ್ಟ್ರೀಯ ಕನ್ನಡ ಸಿರಿ ಸಮ್ಮೇಳನದ ಹಿನ್ನೆಲೆಯಲ್ಲಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಸಂಘಟನಾ ಸಮಿತಿ ಪದಾಧಿಕಾರಿಗಳು ವಿಜ್ಞಾಪನಾ ಪತ್ರ ಸಮರ್ಪಿಸಿದರು.
ಕನ್ನಡ ಸಿರಿ ಸಮ್ಮೇಳನದ ಕಾರ್ಯಾಧ್ಯಕ್ಷ ರಾಂ ಪ್ರಸಾದ್ ಕಾಸರಗೋಡು, ಪ್ರಧಾನ ಕಾರ್ಯದರ್ಶಿ ಭಾಸ್ಕರ ಕೆ., ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ಪೆÇ್ರ.ಎ.ಶ್ರೀನಾಥ್ ಕಾಸರಗೋಡು, ಎಸ್.ವಿ.ಭಟ್, ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.


