ಉಪ್ಪಳ: ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಅಸೀಸ್ ಚೇವಾರ್ ಉದ್ಘಾಟಿಸಿ ಮಾತನಾಡಿ ಆಧುನಿಕ ಶಿಕ್ಷಣವು ಶಿಶು ಸ್ನೇಹಿಯಾಗಿದ್ದು, ವಿದ್ಯಾರ್ಥಿಗಳು ನಿರ್ಭೀತಿಯಿಂದ ಕಲಿತು ತಮ್ಮ ವ್ಯಕ್ತಿತ್ವವನ್ನು ವಿಕಾಸಗೊಳಿಸಲು ಬೇಕಾದ ವೇದಿಕೆ ಶಾಲೆಯಲ್ಲಿ ಲಭಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಶಾಲಾ ಮುಖ್ಯ ಶಿಕ್ಷಕ ಶ್ಯಾಮ್ ಭಟ್ ಅಧ್ಯಕ್ಷತೆ ವಹಿಸಿ ಕಲಿಕೋತ್ಸವದ ಪ್ರಾಧಾನ್ಯತೆಯನ್ನು ವಿವರಿಸಿದರು. ನೌಕರ ಸಂಘದ ಕಾರ್ಯದರ್ಶಿ ವಿಜಯನ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಹಸ್ತ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳು ಕಲಿಕೆಗೆ ಸಂಬಂಧಿಸಿದ ತಮ್ಮ ಸಾಮಥ್ರ್ಯಗಳನ್ನು ಪ್ರದರ್ಶಿಸಿದರು. ಓದುವಿಕೆ, ಬರವಣಿಗೆ, ಚಿತ್ರಕಲೆಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಮತ್ತು ವಿಜಾÐನ ಪ್ರಯೋಗಗಳನ್ನು ನಡೆಸಿದರು. ವಿದ್ಯಾರ್ಥಿಗಳಾದ ಫಾತಿಮತ್‍ಹಸೀನಾ ಸ್ವಾಗತಿಸಿ,ಪಲ್ಲವಿ ವಂದಿಸಿದರು.ಚಿನ್ಮಯಿ ಕಾರ್ಯಕ್ರಮ ನಿರೂಪಿಸಿದರು.



