ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಯಿಂದ ನಿವೃತ್ತಿ ಹೊಂದುತ್ತಿರುವ ಶಾಲಾ ಅಧ್ಯಾಪಿಕೆ ನಳಿನಿ.ಎ ಇವರಿಗೆ ವಿದಾಯಕೂಟ ಕಾರ್ಯಕ್ರಮ ಶಾಲಾ ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಲಹೆಗಾರ ರಾಜೇಶ್ವರಿ ಎಸ್.ರಾವ್ ವಹಿಸಿದ್ದರು. ವಿದ್ಯಾವರ್ಧಕ ಶಾಲಾ ನಿವೃತ್ತ ಅಧ್ಯಾಪಕ ವಸಂತ ಭಟ್ ತೊಟ್ಟೆತ್ತೋಡಿ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್.ಎಂ., ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಹಾಗು ಮಾತೃಸಂಘದ ಅಧ್ಯಕ್ಷೆ ಕೈರುನ್ನಿಸ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಅಧ್ಯಾಪಿಕೆ ನಳಿನಿ.ಎ ಇವರನ್ನು ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡಿ ಸನ್ಮಾನಿಸಲಾಯಿತು. ಗೌರವಾರ್ಪಣೆ ಪತ್ರವನ್ನು ಶಾಲಾ ಅಧ್ಯಾಪಕ ಮಹಾಬಲೇಶ್ವರ ಭಟ್ ವಾಚಿಸಿದರು. ಮುಖ್ಯೋಪಾಧ್ಯಾಯ ಸುಧಾಕರ.ವಿ ಸ್ವಾಗತಿಸಿ, ಅಧ್ಯಾಪಕ ಬಾಲಕೃಷ್ಣ.ಎಂ ವಂದಿಸಿದರು. ಶಿಕ್ಷಕ ರಘುವೀರ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕರು ಹಾಗು ಶಾಲಾ ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿದ್ದರು.


