ಕಾಸರಗೋಡು: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವಂತೆ ಕಾಸರಗೋಡಿನಲ್ಲಿ ವಾಹನ ತಪಾಸಣೆ ಬಿಗು ಗೊಳಿಸಲಾಗಿದೆ.
ಇತರ ರಾಜ್ಯಗಳಿಂದ ಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗುತ್ತದೆ. ಕಾಸರಗೋಡು ಜಿಲ್ಲೆಯ ವಿವಿಧ ಗಡಿ ಪ್ರದೇಶಗಳಲ್ಲಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೆÇಲೀಸರು ವಾಹನ ತಪಾಸಣೆಯನ್ನು ಬಿಗುಗೊಳಿಸಿದ್ದಾರೆ. ಕಾಸರಗೋಡಿನಲ್ಲಿ ಮಾ.19 ರಂದು ಸುಮಾರು 47 ವರ್ಷದ ವ್ಯಕ್ತಿಗೆ ಕೊರೊನಾ ದೃಢಿಕರಿಸಿರುವುದರಿಂದಾಗಿ ಮತ್ತಷ್ಟು ಆತಂಕ ಹೆಚ್ಚಿದೆ.
ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ಬಿಗು ವಾಹನ ತಪಾಸಣೆ ನಡೆಸಲಾಗುತ್ತಿದೆ. ರೈಲು ನಿಲ್ದಾಣಗಳಲ್ಲೂ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗುತ್ತಿದೆ.


