ಬದಿಯಡ್ಕ: ನೀರ್ಚಾಲು ಸಮೀಪದ ಕಂಠಪ್ಪಾಡಿ ಶ್ರೀಸುಬ್ರಹ್ಮಶ್ವೇರ ದೇವಾಲಯದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಮಾ.20 ರಿಂದ 28ರ ವರೆಗೆ ಸಾಂಪ್ರದಾಯಿಕ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಆಯೋಜನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೋನಾ ವೈರಸ್ ಭೀತಿಯ ಕಾರಣ ಜಿಲ್ಲಾಧಿಕಾರಿಗಳು, ಆರೋಗ್ಯ ಅಧಿಕೃತರ ಸೂಚನೆಯ ಮೇರೆಗೆ ಬ್ರಹ್ಮಕಲಶೋತ್ಸವದ ತಾಂತ್ರಿಕ ವಿಧಿವಿಧಾನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಾರ್ಯಕ್ರಮಗಳನ್ನು ಮುಂಜಾಗ್ರತಾ ಕ್ರಮವಾಗಿ ರದ್ದುಗೊಳಿಸಲಾಗಿದೆ ಎಂದು ಕ್ಷೇತ್ರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


