HEALTH TIPS

ಕೈದಿಗಳಿಗೆ ಸೋಂಕು ಹರಡದಂತೆ ತೆಗೆದುಕೊಂಡಿರುವ ಕ್ರಮಗಳ ಮಾಹಿತಿ ನೀಡಿ; ರಾಜ್ಯ ಸರ್ಕಾರಗಳಿಗೆ ಸುಪ್ರೀಂ ನೋಟಿಸ್

 
           ನವದೆಹಲಿ: ದೇಶದ ಕಾರಾಗೃಹಗಳಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಯಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ನಿರ್ದೇಶಕ(ಕಾರಾಗೃಹ), ಎಲ್ಲಾ ಮುಖ್ಯ ಕಾರ್ಯದರ್ಶಿಗಳು ಮತ್ತು ಸಾಮಾಜಿಕ ಕಲ್ಯಾಣ ಇಲಾಖೆಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ
         ದೇಶದ ಜೈಲುಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಕೈದಿಗಳನ್ನು ಭರ್ತಿ ಮಾಡಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿ ಎನ್.ಎನ್. ರಾವ್ ಅವರಿದ್ದ ವಿಭಾಗೀಯ ಪೀಠ, ಜೈಲುಗಳಲ್ಲಿ ಬಹಳಷ್ಟು ಕೈದಿಗಳಿದ್ದು, ಅಲ್ಲಿ ಸೋಂಕು ತಗುಲಿದರೆ ಅಪಾಯಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದೆ. ಸರ್ಕಾರ ಈ ಅವಕಾಶವನ್ನು ಉಪಯೋಗಿಸಿಕೊಂಡು ಕಾರಾಗೃಹಗಳ ಮೂಲಸೌಕರ್ಯಗಳನ್ನು ಹೆಚ್ಚಿಸಿ, ಕೈದಿಗಳ ಸಂಖ್ಯೆಯನ್ನು ಕಡಿಮೆಗೊಳಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ತಿಹಾರ್ ಜೈಲಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಕೈದಿಗಳು ಇರದಂತೆ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಕೈದಿಗಳಲ್ಲಿ ಸೋಂಕು ಕಂಡುಬಂದಲ್ಲಿ ಅವರನ್ನು ಪ್ರತ್ಯೇಕವಾಗಿರಿಸಿ ತಪಾಸಣೆ ನಡಸಲಾಗುತ್ತಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
          ತಿಹಾರ್ ಜೈಲಿನಲ್ಲಿ ಒಂದು ವಾರ್ಡ್ ಗಳಲ್ಲಿ 40ರಿಂದ 50 ಜನರಿದ್ದು, ಒಂದು ವಾರ್ಡ್ ನಲ್ಲಿ 300ರಿಂದ 400 ಕೈದಿಗಳನ್ನು ಇರಿಸಲಾಗಿದೆ ಎಂದು ಹೇಳಿಕೆ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries