HEALTH TIPS

ಕೊರೋನಾ ವೈರಸ್ ಭೀತಿ: ಜೆಸಿಬಿ ಮೂಲಕ ಶಹೀನ್ ಭಾಗ್ ಪ್ರತಿಭಟನಾ ಸ್ಥಳ ತೆರವು

                 
    ನವದೆಹಲಿ: ಮಾರಕ ಕೊರೋನಾ ವೈರಸ್ ಭೀತಿಯಿಂದಾಗಿ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ದೆಹಲಿಯ ಶಹೀನ್ ಭಾಗ್ ನ ಸಿಎಎ ವಿರೋಧಿ ಪ್ರತಿಭಟನಾಕಾರನ್ನು ತೆರವುಗೊಳಿಸಲಾಗಿದೆ.
    ದೇಶಾದ್ಯಂತ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿ ಸೇರಿದಂತೆ ದೇಶದ ಎಲ್ಲ ರಾಜ್ಯಗಳನ್ನು ಲಾ???ಡೌನ್ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈ ಹಿಂದೆ ನೂರಾರು ಮಹಿಳೆಯರು ಹಲವು ದಿನಗಳಿಂದ ಬೀಡುಬಿಟ್ಟಿದ್ದ ಶಾಹೀನ್ ಬಾಗ್ ಪ್ರತಿಭಟನಾ ಸ್ಥಳವನ್ನು ದೆಹಲಿ ಪೆÇಲೀಸ್ ಸಿಬ್ಬಂದಿ ಇಂದು ತೆರವುಗೊಳಿಸಿದ್ದಾರೆ. ಜೆಸಿಬಿ ಬಳಸಿ ಪ್ರತಿಭಟನಾಕಾರರು ಹಾಕಿದ್ದ ಟೆಂಟ್ ಗಳನ್ನು ಅಧಿಕಾರಿಗಳು ಕಿತ್ತುಹಾಕಿದ್ದು, ಪ್ರತಿಭಟನಾಕಾರರನ್ನು ಶಾಹೀನ್ ಬಾ???ನಿಂದ ಬಲವಂತವಾಗಿ ಹೊರಹಾಕಲಾಗಿದೆ. ಈ ವೇಳೆ ಮಹಿಳಾ ಪ್ರತಿಭಟನಾಕಾರರು ಮತ್ತು ಪೆÇಲೀಸರ ನಡುವೆ ವಾಗ್ಲಾದ ನಡೆಯಿತು. ಬಳಿಕ ಪೆÇಲೀಸರು ಸೆಕ್ಷನ್ 144 ನಿಷೇಧಿತ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ 6 ಮಹಿಳೆಯರು ಮತ್ತು 3 ಪುರುಷರನ್ನು ಶಾಹೀನ್ ಬಾ???ನಿಂದ ವಶಕ್ಕೆ ಪಡೆದಿದ್ದಾರೆ. ಬಳಿಕ ಜೆಸಿಬಿ ಮೂಲಕ ಸ್ಥಳವನ್ನು ತೆರವುಗೊಳಿಸಲಾಯಿತು.
     ಈ ಕುರಿತು ಪ್ರತಿಕ್ರಿಯೆ ನೀಡಿರುವ ದೆಹಲಿ ಆಗ್ನೇಯ ಡಿಸಿಪಿ, ದೆಹಲಿ ಲಾಕ್ ಡೌನ್ ಘೋಷಿಸಿದ್ದರಿಂದ ಶಾಹೀನ್ ಬಾಗ್ ಪ್ರತಿಭಟನಾ ಸ್ಥಳವನ್ನು ತೊರೆಯುವಂತೆ ಕೋರಲಾಗಿತ್ತು. ಆದರೆ ಪ್ರತಿಭಟನಾಕಾರರು ನಿರಾಕರಿಸಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಯಿತು. ಈಗಾಗಲೇ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಲಾಗಿದೆ. ಅದರಲ್ಲಿ ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries