ತಿರುವನಂತಪುರಂ: ಕೇರಳದ ರಾಜಧಾನಿ ತಿರುವನಂತಪುರಂನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಅಟ್ಟುಕಲ್ ನಲ್ಲಿ ಇಂದು ನಡೆಯಲಿರುವ ಪೆÇಂಗಲ್ ಉತ್ಸವದಲ್ಲಿ ಸುಮಾರು 45 ಲಕ್ಷ ಮಹಿಳೆಯರು ಭಾಗವಹಿಸುವ ನಿರೀಕ್ಷೆಯಿದೆ.
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಅನಾರೋಗ್ಯದ ಲಕ್ಷಣಗಳು ಕಂಡುಬಂದ ಮಹಿಳೆಯರು ಈ ಉತ್ಸವದಲ್ಲಿ ಪಾಲ್ಗೊಳ್ಳದಂತೆ , ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ದೇವಾಲಯದ ಆವರಣ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಭಕ್ತಾಧಿಗಳು ಈಗಾಗಲೇ ಜಾಗವನ್ನು ಕಾಯ್ದಿರಿಸುತ್ತಿದ್ದಾರೆ. ದೂರದ ಊರುಗಳಿಂದ ಬರುವವರು ಬಸ್ ಹಾಗೂ ರೈಲುಗಳ ಮೂಲಕ ಬರುತ್ತಿದ್ದಾರೆ. ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿರುವುದಾಗಿ ದೇವಾಲಯದ ಪದಾಧಿಕಾರಿಗಳು ತಿಳಿಸಿದ್ದಾರೆ. ಪೆÇಂಗಲ ಉತ್ಸವದಲ್ಲಿ ಭಾಗಿಯಾಗುವ ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ. ಶಶಿಧರನ್ ನಾಯ್ಯರ್ ಹೇಳಿದ್ದಾರೆ.ಭಕ್ತಾಧಿಗಳಿಗಾಗಿ ಹೆಚ್ಚಿನ ಸಂಖ್ಯೆಯ ತಾತ್ಕಾಲಿಕ ಶೌಚಾಲಯಗಳನ್ನು ತೆರೆಯಲಾಗಿದೆ. ಮಹಿಳೆಯರ ಸುರಕ್ಷತೆಗಾಗಿ ಸೂಕ್ತ ಪೆÇಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಸಂಚಾರ ನಿರ್ವಹಣೆಗಾಗಿ ಸುಮಾರು 3 ಸಾವಿರ ಪೆÇಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಮಧ್ಯೆ ಕೋವಿಂದ್ 19 ಬಗ್ಗೆ ಯಾವುದೇ ರೀತಿಯ ಭಯ ಪಡಬೇಕಾದ ಅಗತ್ಯವಿಲ್ಲ, ರಾಜ್ಯದಲ್ಲಿ ಅಂತಹ ಪರಿಸ್ಥಿತಿ ಕಂಡುಬಂದಿಲ್ಲ. ಆದಾಗ್ಯೂ, ಜ್ವರ, ಕೆಮ್ಮು ಮತ್ತಿತರ ಲಕ್ಷಣಗಳು ಕಂಡುಬಂದವರು ಅಟ್ಟುಕಲ್ ಪೆÇಂಗಲ ಉತ್ಸವದಿಂದ ದೂರ ಉಳಿಯುವಂತೆ ಆರೋಗ್ಯ ಸಚಿವೆ ಶೈಲಾಜಾ ಸೂಚನೆ ನೀಡಿದ್ದಾರೆ.


