ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ ಒಬ್ಬರಿಗೆ ಕೋವಿಡ್ 19 ಸೋಂಕು ತಗುಲಿರುವುದು ಖಚಿತವಾಗಿದೆ. ನೆಲ್ಲಿಕುಂಜೆ ನಿವಾಸಿ 7 ವರ್ಷದ ಬಾಲಕನಿಗೆ ಈ ರೋಗ ತಗುಲಿದೆ. ಈತನ ತಂದೆ ಮತ್ತು ತಾಯಿ ಕೋವಿಡ್ 19 ತಗುಲಿರುವುದು ಖಚಿತಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರ ಸ್ಥಿತಿ ತೃಪ್ತಿಕರವಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ಈ ಮೂಲಕ ಜಿಲ್ಲೆಯಲ್ಲಿ ಸೋಂಕು ಬಾಧಿತರ ಸಂಖ್ಯೆ 139ಕ್ಕೇರಿದೆ. ಜಿಲ್ಲೆಯಲಿ 10731 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 232 ಮಂದಿ ಆಸ್ಪತ್ರೆಗಳಲ್ಲಿ, 10499 ಮಂದಿ ಮನೆಗಳಲ್ಲಿ ನಿಗಾದಲ್ಲಿದ್ದಾರೆ. ನೂತನವಾಗಿ 43 ಮಂದಿಯನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.


