ನವದೆಹಲಿ: ಕೊರೋನಾ ವೈರಸ್ ಸೋಂಕು ದೇಶಾದ್ಯಂತ ವ್ಯಾಪಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 796 ಕೊರೋನಾ ಪ್ರಕರಣ ಪತ್ತೆಯಾಗಿದ್ದು, 35 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಕೊವಿಡ್-19 ಪ್ರಕರಣಗಳ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರವಾಲ್ ಅವರು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 796 ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 9152ಕ್ಕೆ ಏರಿಕೆಯಾಗಿದೆ. ಈವರೆಗೆ ದೇಶದಲ್ಲಿ 308 ಮಂದಿ ಕೊರೋನಾ ವೈರಸ್ ನಿಂದ ಮೃತಪಟ್ಟಿದ್ದಾರೆ ಎಂದರು.
857 ಮಂದಿ ಕೊರೊನಾ ಬಾಧಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. ನಿನ್ನೆಯವರೆಗೆ ದೇಶಾದ್ಯಂತ 2 ಲಕ್ಷದ 6 ಸಾವಿರದ 212 ಮಂದಿಗೆ ಕೋವಿಡ್ - 19 ಪರೀಕ್ಷೆಗಳನ್ನು ನಡೆಸಲಾಗಿದ್ದು. ಜನರು ಯಾವುದೇ ಭಯ ಭೀತಿ ಹೊಂದುವ ಆಗತ್ಯವಿಲ್ಲ ಎಂದು ಧೈರ್ಯ ಹೇಳಿದ್ದಾರೆ. ಚೀನಾದಿಂದ ಅಔಗಿIಆ 19 ಕಿಟ್‍ಗಳ ಮೊದಲ ಸರಕು ಏಪ್ರಿಲ್ 15 ರಂದು ಭಾರತಕ್ಕೆ ಬರಲಿದೆ. ಕೆಲವು ಜಿಲ್ಲೆಗಳಲ್ಲಿ ಕೊರೋನವೈರಸ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಬರ್ಂಧಿಸಲಾಗಿದೆ. ಈ ಪ್ರದೇಶಗಳಿಂದ 14 ದಿನಗಳಲ್ಲಿ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಅಗತ್ಯಸೇವೆ ವಿಭಾಗದವರಿಗೆ ಪಾಸುಗಳನ್ನು ಜಾರಿಗೊಳಿಸಲಾಗಿದೆ. ಸೋಂಕು ತಗುಲದಂತೆ ಜನರು ಹೆಚ್ಚಿನ ಜಾಗೃತೆ ವಹಿಸಬೇಕು. ಸಾಮಾಜಿಕ ಅಂತರ ಪಾಲಿಸಬೇಕು. ಕೊರೋನಾ ನಿಯಂತ್ರಣ ಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರಗಳೊಂದಿಗೆ ಕೇಂದ್ರ ಸರ್ಕಾರ ನಿರಂತರ ಸಮಾಲೋಚನೆ ನಡೆಸುತ್ತಿದೆ ಎಂದು ಹೇಳಿದರು.


