HEALTH TIPS

ಕೋವಿಡ್ ಸೋಂಕು : ಕಾಸರಗೋಡು ಜಿಲ್ಲೆಯಲ್ಲಿ ಶೇ 84.88 ಮಂದಿ ಗುಣಮುಖ


         ಕಾಸರಗೋಡು: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಖಚಿತಗೊಂಡಿದ್ದವರಲ್ಲಿ ಶೇ 84.88 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ.
          ಈ ವರೆಗೆ ಜಿಲ್ಲೆಯಲ್ಲಿ 172 ಮಂದಿ ಸೋಂಕು ಬಾಧಿತರಾಗಿದ್ದು, 146 ಮಂದಿ ಗುಣಮುಖರಾಗಿದ್ದಾರೆ. ಇವರಲ್ಲಿ 86 ಮಂದಿ ಕಾಸರಗೋಡು ಜನರಲ್ ಆಸ್ಪತ್ರೆಯಿಂದ, ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯಿಂದ 33 ಮಂದಿ, ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್ ಕಾಲೇಜಿನಿಂದ 8 ಮಂದಿ, ಪರಿಯಾರಂ ವೈದ್ಯಕೀಯ ಕಾಲೇಜಿನಿಂದ 17 ಮಂದಿ, ಕೋಯಿಕೋಡ್ ಸರಕಾರಿ ಮೆಡಿಕಲ್ ಕಾಲೇಜಿನಿಂದ ಇಬ್ಬರು ಕಾಸರಗೋಡು ಜಿಲ್ಲೆಯವರು ರೋಗಮುಕ್ತರಾಗಿ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ದೇಶದಲ್ಲೇ ಅತ್ಯಧಿಕ ಪ್ರಮಾಣದಲ್ಲಿ ಕೋವಿಡ್ ರೋಗಿಗಳು ಗುಣಮುಖರಾದ ಹೆಗ್ಗಳಿಕೆ ಕಾಸರಗೋಡು ಜಿಲ್ಲೆಗೆ ಲಭಿಸಿದೆ.
    ಕಾಸರಗೋಡು ಜಿಲ್ಲೆಯಲ್ಲಿ ಇನ್ನು 26 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 12 ಮಂದಿ ಉಕ್ಕಿನಡ್ಕ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ, 4 ಮಂದಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ, 9 ಮಂದಿ ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯಲ್ಲಿ, ಒಬ್ಬರು ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿದ್ದಾರೆ.
     ಈ ವರ್ಷ ಮಾರ್ಚ್ ಮಧ್ಯ ಅವಧಿಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಲೆದೋರಿತ್ತು. ರಾಜ್ಯ ಸರಕಾರ ಮತ್ತು ಆರೋಗ್ಯ ಇಲಾಖೆಯ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸುವ ಮತ್ತು ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಿನಿಂದ ಪಾಲಿಸಿದ ಪರಿಣಾಮ ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ಗಮನಾರ್ಹ ರೀತಿ ನಿಯಂತ್ರಣದಲ್ಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries