HEALTH TIPS

ಕೊರೊನಾ : ಕಾಸರಗೋಡು ಜಿಲ್ಲೆಯಲ್ಲಿ 8 ಮಂದಿ ರೋಗ ಮುಕ್ತಿ-ಒಬ್ಬರಿಗೆ ಸೋಂಕು ದೃಢ

   
         ಕಾಸರಗೋಡು: ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು, ಜಿಲ್ಲೆಯಲ್ಲಿ ಭಾನುವಾರ 8 ಮಂದಿ ಗುಣಮುಖರಾಗಿದ್ದಾರೆ. ಒಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಡಿಸಲಾಗಿದೆ.
        ಕೇರಳದಲ್ಲಿ ಭಾನುವಾರ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಡಿಸಲಾಗಿದೆ. ಕಾಸರಗೋಡು-1 ಮತ್ತು ಕಣ್ಣೂರು-1 ಎಂಬಂತೆ ಕೊರೊನಾ ವೈರಸ್ ಸೋಂಕು ಬಾ„ಸಿದೆ. ಇದೇ ವೇಳೆ ರಾಜ್ಯದಲ್ಲಿ ರವಿವಾರ 13 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಣ್ಣೂರು ಜಿಲ್ಲೆಯ ವ್ಯಕ್ತಿ ಅಬುದಾಬಿಯಿಂದಲೂ, ಕಾಸರಗೋಡಿನ ವ್ಯಕ್ತಿ ದುಬೈಯಿಂದಲೂ ಬಂದವರು. ಕಾಸರಗೋಡು ಜಿಲ್ಲೆಯಲ್ಲಿ 8, ಕಣ್ಣೂರು ಜಿಲ್ಲೆಯಲ್ಲಿ 3, ಮಲಪ್ಪುರ ಮತ್ತು ತೃಶ್ಶೂರು ಜಿಲ್ಲೆಯಲ್ಲಿ ತಲಾ ಒಬ್ಬರು ಗುಣಮುಖರಾಗಿದ್ದಾರೆ. ಇದರೊಂದಿಗೆ ಕೇರಳದಲ್ಲಿ ಈ ವರೆಗೆ 270 ಮಂದಿ ಗುಣಮುಖ ಹೊಂದಿದ್ದಾರೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಾಗಿ ಒಟ್ಟು 129 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
      ರಾಜ್ಯದ ವಿವಿಧ ಜಿಲ್ಲೆಗಳಲ್ಲಾಗಿ 55590 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 55129 ಮಂದಿ ಮನೆಗಳಲ್ಲೂ, 461 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ. ರವಿವಾರ 72 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಆರೋಗ್ಯ ಸಚಿವೆ ಶೈಲಜಾ ಟೀಚರ್ ತಿಳಿಸಿದ್ದಾರೆ. ರೋಗ ಲಕ್ಷಣಗಳಿದ್ದ 19351 ವ್ಯಕ್ತಿಗಳ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ ಲಭ್ಯ 18547 ಮಂದಿ ಸ್ಯಾಂಪಲ್ ಪರೀಕ್ಷೆಯಲ್ಲಿ ನೆಗೆಟಿವ್ ಆಗಿದೆ.
       ಕಾಸರಗೋಡು ಜಿಲ್ಲೆಯಲ್ಲಿ ಇದು ತನಕ ಒಟ್ಟು 169 ಮಂದಿಗೆ ಸೋಂಕು ದೃಢವಾಗಿದ್ದು, ಈ ವರೆಗೆ 123 ಮಂದಿ ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ 46 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆಮ್ನಾಡ್ ಗ್ರಾಮ ಪಂಚಾಯತ್‍ನ ತೆಕ್ಕಿಲ್ ನಿವಾಸಿ 48 ವರ್ಷದ ಪುರುಷ ಸೋಂಕಿಗೀಡಾದವರು. ಇವರು ಮಾ.16ರಂದು ದುಬೈಯಿಂದ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಿಂದ ಮೂವರು, ಕಾಸರಗೋಡು ಸರಕಾರಿ ಮೆಡಿಕಲ್ ಕಾಲೇಜಿನಿಂದ ಮೂವರು, ಕಾಂಞಂಗಾಡ್‍ನ ಜಿಲ್ಲಾ ಸರಕಾರಿ ಆಸ್ಪತ್ರೆಯಿಂದ ಇಬ್ಬರು ರವಿವಾರ ಬಿಡುಗಡೆಗೊಂಡಿದ್ದಾರೆ.                   
          45 ಕೇಸು ದಾಖಲು : ಲಾಕ್‍ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಪೆÇಲೀಸರು 45 ಕೇಸುಗಳನ್ನು ದಾಖಲಿಸಿದ್ದಾರೆ. 67 ಮಂದಿಯನ್ನು ಬಂ„ಸಲಾಗಿದ್ದು, 11 ವಾಹನಗಳನ್ನು ವಶಪಡಿಸಲಾಗಿದೆ. ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ 4 ಕೇಸುಗಳು, ಕುಂಬಳೆ 1, ಕಾಸರಗೋಡು 2, ವಿದ್ಯಾನಗರ 7, ಬದಿಯಡ್ಕ 4, ಆದೂರು 1, ಬೇಡಗಂ 3, ಮೇಲ್ಪರಂಬ 8, ಬೇಕಲ 1, ಅಂಬಲತ್ತರ 1, ನೀಲೇಶ್ವರ 2, ಹೊಸದುರ್ಗ 2, ಚಂದೇರ 3, ವೆಳ್ಳರಿಕುಂಡ್ 3, ಚಿತ್ತಾರಿಕಲ್ 3 ಕೇಸು ದಾಖಲಿಸಲಾಗಿದೆ. ಈ ವರೆಗೆ ಜಿಲ್ಲೆಯಲ್ಲಿ 1183 ಕೇಸುಗಳನ್ನು ದಾಖಲಿಸಲಾಗಿದೆ. 1619 ಮಂದಿಯನ್ನು ಬಂಧಿಸಲಾಗಿದೆ. 543 ವಾಹನಗಳನ್ನು ವಶಪಡಿಸಲಾಗಿದೆ.     
      ಕೇಂದ್ರ ಸರ್ಕಾರದ ಶ್ಲಾಘನೆ : ಕಾಸರಗೋಡು ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಕೇಂದ್ರ ಸರ್ಕಾರ ಶ್ಲಾಘಿಸಿದೆ. ಆರಂಭದಲ್ಲಿ ಕಾಸರಗೋಡು ಜಿಲ್ಲೆ ಕೋವಿಡ್ 19 ಹಾಟ್‍ಸ್ಪಾಟ್ ಆಗಿದ್ದೂ, ಸೂಕ್ತ ಕಟ್ಟುನಿಟ್ಟು ಜಾರಿಗೊಳಿಸುವ ಮೂಲಕ ಸೋಂಕು ಹರಡುವಿಕೆ ತಡೆಗಟ್ಟುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ದೇಶದಲ್ಲೇ ಪ್ರಥಮ ಬಾರಿಗೆ ಕೋವಿಡ್ ನಿಯಂತ್ರಿಸುವಲ್ಲಿ ಪ್ರಥಮ ಸ್ಥಾನ ಪಡೆದು ದೇಶಕ್ಕೆ ಮಾದರಿಯಾಗಿದೆ ಎಂದು ಕೇಂದ್ರ ಸರ್ಕಾರ ಅಭಿನಂದನೆ ತಿಳಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries