ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿಲ್ಲ ಅಲ್ಲದೆ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಂದಿ ಗುಣಮುಖರಾಗಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಮಾತ್ರ ಒಂದು ಕೊರೊನಾ ವೈರಸ್ ಸೋಂಕು ಪ್ರಕರಣ ದಾಖಲಾಗಿದ್ದು ಸಂಪರ್ಕದಿಂದ ಕೊರೊನಾ ವೈರಸ್ ಸೋಂಕು ಬಾಧಿಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕೇರಳದಲ್ಲಿ ಬುಧವಾರ 7 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಮುಕ್ತರಾಗಿದ್ದಾರೆ. ಕಾಸರಗೋಡಿನಲ್ಲಿ ನಾಲ್ವರು, ಕಲ್ಲಿಕೋಟೆಯಲ್ಲಿ ಇಬ್ಬರು ಮತ್ತು ಕೊಲ್ಲಂ ಜಿಲ್ಲೆಯಲ್ಲಿ ಒಬ್ಬರು ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ವರೆಗೆ ರಾಜ್ಯದಲ್ಲಿ ಒಟ್ಟು 387 ಮಂದಿಗೆ ಕೊರೊನಾ ವೈರಸ್ ಸೋಂಕು ಬಾಧಿಸಿದ್ದು, ಈ ಪೈಕಿ 218 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ 167 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೇರಳದಲ್ಲಿ ಪ್ರಸ್ತುತ ಒಟ್ಟು 97,464 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 96,942 ಮನೆಗಳಲ್ಲಿ, 522 ಮಂದಿ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ. ಬುಧವಾರ 86 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 16475 ಸ್ಯಾಂಪಲ್ ಪರೀಕ್ಷೆಯಲ್ಲಿ 16002 ನೆಗೆಟಿವ್ ಫಲಿತಾಂಶ ಬಂದಿದೆ.
ಕಾಸರಗೋಡಿನಲ್ಲಿ ನಾಲ್ವರು ರೋಗ ಮುಕ್ತ :
ಎ.15 ರಂದು ಕಾಸರಗೋಡು ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ವೈರಸ್ ಸೋಂಕು ಪ್ರಕರಣ ದಾಖಲಾಗಿಲ್ಲ. ಅದೇ ವೇಳೆ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಕೊರೊನಾ ವೈರಸ್ ಸೋಂಕಿನಿಂದ ಮುಕ್ತರಾಗಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 167 ಮಂದಿ ಸೋಂಕು ದೃಢೀಕರಿಸಲಾಗಿದ್ದು, ಈ ಪೈಕಿ 83 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ 84 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಗುಣಮುಖರಾದವರಲ್ಲಿ ಮೂವರು ಕಾಸರಗೋಡಿನ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು. ಇನ್ನೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು.
47 ಕೇಸು ದಾಖಲು :
ಲೋಕ್‍ಡೌನ್ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಗಳಲ್ಲಾಗಿ 47 ಕೇಸುಗಳನ್ನು ದಾಖಲಿಸಲಾಗಿದೆ. ಮಂಜೇಶ್ವರ-2, ಕುಂಬಳೆ-2, ಕಾಸರಗೋಡು-6, ವಿದ್ಯಾನಗರ-2, ಬೇಡಡ್ಕ-1, ಮೇಲ್ಪರಂಬ-10, ಬೇಕಲ-4, ಅಂಬಲತ್ತರ-1, ಹೊಸದುರ್ಗ-2, ನೀಲೇಶ್ವರ-2, ಚಂದೇರ-3, ವೆಳ್ಳರಿಕುಂಡು-2, ಚಿಟ್ಟಾರಿಕ್ಕಲ್-4, ರಾಜಪುರಂ-3 ಎಂಬಂತೆ ಕೇಸುಗಳನ್ನು ದಾಖಲಿಸಲಾಗಿದೆ. ವಿವಿಧ ಪ್ರಕರಣಗಳಿಗೆ ಸಂಬಂ„ಸಿ 63 ಮಂದಿಯನ್ನು ಬಂಧಿಸಲಾಗಿದೆ. 21 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಇದು ವರೆಗೆ ಜಿಲ್ಲೆಯಲ್ಲಿ ವಿವಿಧ ಠಾಣೆಗಳಲ್ಲಾಗಿ 875 ಕೇಸುಗಳನ್ನು ದಾಖಲಿಸಲಾಗಿದೆ. ವಿವಿಧ ಕೇಸುಗಳಿಗೆ ಸಂಬಂಧಿಸಿ 1376 ಮಂದಿಯನ್ನು ಬಂ„ಸಿದ್ದು, 493 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.


