HEALTH TIPS

ಕೋವಿಡ್‍ನಿಂದ ಮುಕ್ತಿ ಬಳಿಕ ವಿಶ್ವ ಆರೋಗ್ಯ ಸಂಸ್ಧೆ ಪುನಾಃರಚನೆ: ಭಾರತದ ಆಗ್ರಹಕ್ಕೆ ಆಸ್ಟ್ರೇಲಿಯಾ ಬೆಂಬಲ

     
   ನವದೆಹಲಿ: ಕೋವಿಡ್ 19 ಮಹಾಮಾರಿಯಿಂದ ಮುಕ್ತಿ ಬಳಿಕ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್ ಒ)ಯನ್ನು ಮರುರಚಿಸಬೇಕು ಎಂಬ ಭಾರತದ ವಾದಕ್ಕೆ ಆಸ್ಟ್ರೇಲಿಯಾ ಬೆಂಬಲ ವ್ಯಕ್ತಪಡಿಸಿದೆ.
      ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಡಬ್ಲ್ಯೂಎಚ್ ಒ ಅನ್ನು ಮರುರಚಿಸಬೇಕು ಎಂದು ಜಿ20 ರಾಷ್ಟ್ರಗಳ ನಾಯಕರ ವರ್ಚುಯಲ್ ಸಭೆಯಲ್ಲಿ ಆಗ್ರಹಿಸಿದ್ದರು. ಇದಕ್ಕೆ ಆಸ್ಟ್ರೇಲಿಯಾ ಸರ್ಕಾರದ ಬೆಂಬಲವಿದೆ ಎಂದು ಭಾರತದಲ್ಲಿರುವ ಆಸ್ಟ್ರೇಲಿಯಾದ ನಿಯೋಜಿತ ರಾಯಭಾರಿ ಬ್ಯಾರಿ ಓ ಫೆರಲ್ ಹೇಳಿದ್ದರು. ಜಗತ್ತನ್ನೇ ಆವರಿಸಿರುವ ಮಹಾಮಾರಿ ಕೊರೋನಾ ಪರಿಸ್ಥಿತಿಯನ್ನು ಡಬ್ಲ್ಯೂಎಚ್ ಒ ನಿಭಾಯಿಸಿದ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂಬುದು ಆಸ್ಟ್ರೇಲಿಯಾದ ಅಭಿಪ್ರಾಯವಾಗಿದೆ. ಆದರೆ ಸದ್ಯ ಇದು ಸಾಧ್ಯವಿಲ್ಲ. ಕೋವಿಡ್ ಬಳಿಕ ಈ ಬಗ್ಗೆ ನಿರ್ಧಾರಕೈಗೊಳ್ಳುವುದಾಗಿ ಹೇಳಿದ್ದಾರೆ.
       ಜಗತ್ತಿನಾದ್ಯಂತ ಕೊರೋನಾ ವೈರಸ್ ಸೋಂಕಿಗೆ 27,63,080 ಮಂದಿ ತುತ್ತಾಗಿದ್ದಾರೆ. ಇನ್ನು 1,93 ಲಕ್ಷ ಮಂದಿ ಅದಾಗಲೇ ಬಲಿಯಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries