ಮಧೂರು: ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ (ಎ.14) ಬಿಸು ಕಣಿ ಉತ್ಸವ ಇರುವುದಿಲ್ಲ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ. ಭಕ್ತರು ಸಹಕರಿಸಬೇಕಾಗಿ ವಿನಂತಿಸಲಾಗಿದೆ.