ನವದೆಹಲಿ: ಚಿಕಿತ್ಸೆ ನೀಡಲು ಬಂದಿದ್ದ ವೈದ್ಯರು ಹಾಗೂ ನರ್ಸ್‍ಗಳ ಮೇಲೆ ಉಗುಳಿ ಅಸಭ್ಯವಾಗಿ ನಡೆದುಕೊಂಡಿದ್ದ ತಬ್ಲಿಘಿ ಜಮಾತ್ ಕಾರ್ಯಕರ್ತರು ಇನ್ನೂ ಕೆಳಮಟ್ಟಕ್ಕೆ ಇಳಿದಿದ್ದಾರೆ.
ಜಮಾತ್ ಕಾರ್ಯಕರ್ತರನ್ನು ಆಸ್ಪತ್ರೆಯಲ್ಲಿ ಗೃಹಬಂಧನದಲ್ಲಿಡಲಾಗಿದ್ದು, ಆಸ್ಪತ್ರೆಯ ಸುತ್ತಲೂ ಅರೆಬೆತ್ತಲೆಯಾಗಿ ಓಡಾಡಿ ಕೆಟ್ಟದಾಗಿ ವರ್ತಿಸಿದ್ದಾರೆ. ನಿಜಾಮುದ್ದೀನ್ ಮರ್ಕಜ್ ಸಮೀಪ ಗಾಜಿಯಾಬಾದ್ ನ ಆಸ್ಪತ್ರೆಯೊಂದರಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಜಿಯಾಬಾದ್ ಆಸ್ಪತ್ರೆಯ ಅಧಿಕಾರಿಯೊಬ್ಬರು ಉತ್ತರ ಪ್ರದೇಶ ಪೆÇಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿ ವೈದ್ಯಕೀಯ ವೀಕ್ಷಣೆಗೆ ಒಳಪಡಿಸಲಾಗಿರುವ ಉತ್ತರ ಪ್ರದೇಶದ ನಗರ ಮೂಲದ ತಬ್ಲಿಘಿಗಳು ಅಸಭ್ಯವಾಗಿ ವರ್ತಿಸುತ್ತಿದ್ದಾರೆ.
ಅವರು ಪ್ಯಾಂಟ್ ಧರಿಸದೇ ತಿರುಗಾಡುತ್ತಿರುವುದು, ಅಶ್ಲೀಲ ಸನ್ನೆಗಳನ್ನು ಮಾಡುವುದು, ಕರ್ಕಷವಾಗಿ ಹಾಡುವುದು ಹಾಗೂ ಸಿಗರೇಟ್ ಕೊಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.
ತಬ್ಲಿಘಿ ಜಮಾತ್ ನ ನಿಜಾಮುದ್ದೀನ್ ಸಂಕೀರ್ಣದಿಂದ ಬುಧವಾರ ಸ್ಥಳಾಂತರಿಸಿದ ಕ್ವಾರಂಟೈನ್ ಗಳ ವಿರುದ್ಧ ನರ್ಸ್ ಗಳು ದೂರಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.
ವೈದ್ಯರ ಬಳಿ ಅಶಿಸ್ತು ಪ್ರದರ್ಶನ:
ಕ್ವಾರಂಟೈನ್ ನಲ್ಲಿರುವ ಕೆಲವರು ಬುಧವಾರ ಬೆಳಗ್ಗೆಯಿಂದ ಅಶಿಸ್ತಿನಿಂದ ವರ್ತಿಸಿದ್ದರು. ಆಹಾರ ಪದಾರ್ಥಗಳಿಗೆ ಅಸಮಂಜಸ ಬೇಡಿಕೆ ಇಟ್ಟಿದ್ದರು. ಅಷ್ಟೇ ಅಲ್ಲದೆ ಕ್ಯಾರೆಂಟೈನ್ ಸೆಂಟರ್ ನಲ್ಲಿರುವ ಸಿಬ್ಬಂದಿ, ವೈದ್ಯರೊಂದಿಗೆ ಅಸಭ್ಯವಾಗಿ ನಡೆದುಕೊಂಡು, ಅವರ ಮೇಲೆ ಉಗುಳಿದ್ದರು. ಜೊತೆಗೆ ಹಾಸ್ಟೆಲ್ ಕಟ್ಟಡದ ಸುತ್ತಲೂ ತಿರುಗಾಟ ನಡೆಸಿದ್ದರು ಎಂದು ವರದಿಯಾಗಿತ್ತು.
ಏಪ್ರಿಲ್ 1 ರಂದು ನಡೆದ ಘಟನೆ
ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 167 ಜನರನ್ನು ತುಘಲಕಾಬಾದ್ ನಲ್ಲಿ 2,140 ಗಂಟೆಗಳ ಕಾಲ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಈ ಪೈಕಿ 97 ಜನರನ್ನು ಡೀಸೆಲ್ ಶೆಡ್ ತರಬೇತಿ ಶಾಲೆಯ ಹಾಸ್ಟೆಲ್ ಕ್ಯಾರೆಂಟೈನ್ ಸೆಂಟರ್ ಮತ್ತು 70 ಜನರಿಗೆ ಆರ್ ಸಿ ಪಿಎಫ್ ಬ್ಯಾರಕ್ ಕ್ಯಾರಂಟೈನ್ ಸೆಂಟರ್ ನಲ್ಲಿ ಇರಿಸಲಾಗಿದೆ ಎಂದು ಎಎನ್ ಐ ಸುದ್ದಿ ಸಂಸ್ಥೆ ಬುಧವಾರ ವರದಿ ಮಾಡಿತ್ತು.
ಮಸೀದಿಯಲ್ಲಿ ನಡೆದ ಕಾರ್ಯಕ್ರಮ ತಬ್ಲಿಘಿ-ಎ-ಜಮಾತ್ ಎಂಬ ಧಾರ್ಮಿಕ ಸಂಸ್ಥೆ ಮಾರ್ಚ್ 1ರಿಂದ ಮಾರ್ಚ್ 15ರವರೆಗೂ ದೆಹಲಿ ಹೊರವಲಯದಲ್ಲಿರುವ ನಿಜಾಮುದ್ದೀನ್ ಪ್ರಾಂತ್ಯದ ಮರ್ಕಜ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿವಿಧ ರಾಜ್ಯಗಳಿಂದ 2,500ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂಡೋನೇಷಿಯಾ, ಮಲೇಷಿಯಾ, ಥಾಯ್ಲೆಂಡ್, ಸೌದಿ ಅರೇಬಿಯಾ, ಕಜಕಿಸ್ತಾನ ಸೇರಿದಂತೆ ಒಟ್ಟು 16 ದೇಶಗಳ ಧರ್ಮಗುರುಗಳಿಂದ ಉಪನ್ಯಾಸವನ್ನು ಆಯೋಜಿಸಲಾಗಿತ್ತು.
ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದ ಕಾರ್ಯಕರ್ತರು ಈ ಕಾರ್ಯಕ್ರಮದ ಆಯೋಜಕರು ಮತ್ತು ಬೆಂಬಲಿಸುವ ವ್ಯಕ್ತಿಗಳು ಯಾವುದೇ ಉಲ್ಲಂಘನೆ ಆಗಿಲ್ಲ. ಜನತಾ ಕಫ್ರ್ಯೂ ಮತ್ತು 21 ದಿನಗಳ ಲಾಕ್ ಡೌನ್ ಘೋಷಣೆಯಾಗಿದ್ದರಿಂದ ಅಲ್ಲಿದ್ದ ಮಂದಿಗೆ ಊರಿಗೆ ತೆರಳಲು ಸಾಧ್ಯವಾಗಿಲ್ಲ ಎಂದು ವಾದಿಸುತ್ತಿದ್ದಾರೆ. ಆದರೆ ಈ ಕಾರ್ಯಕ್ರಮ ಕಾನೂನು ಮತ್ತು ನಿಯಮಗಳನ್ನು ಉಲ್ಲಂಘಿಸಿ ನಡೆಸಲಾಗಿದೆ ಎನ್ನುವುದಕ್ಕೆ ಹಲವು ಸಾಕ್ಷ್ಯಗಳು ಸಿಗುತ್ತಿವೆ. ಕಾರ್ಯಕ್ರಮದ ಅವಧಿಯಲ್ಲಿ ಮರ್ಕಜ್ ಮಸೀದಿಯಲ್ಲೇ 280 ಧರ್ಮಗುರುಗಳು ಉಳಿದುಕೊಂಡಿದ್ದರು. 8 ಸಾವಿರಕ್ಕೂ ಹೆಚ್ಚು ಭಾರತೀಯ ಮುಸ್ಲಿಮರಿಂದಲೂ ಅದೇ 6 ಅಂತಸ್ತಿನ ಮಸೀದಿಯಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಧಾರ್ಮಿಕ ಕಾರ್ಯಕ್ರಮದಲ್ಲಿ ಕೊರೋನಾ ವೈರಸ್ ಪಾಲ್ಗೊಂಡವರಿಗೆ ಕೊರೊನಾ ವೈರಸ್ ಹಬ್ಬಿದೆ.



