HEALTH TIPS

ಕೊರೊನಾ : ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಸೋಂಕು ದೃಢ

 
        ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ ಮೂವರಿಗೆ ಕೊರೊನಾ ವೈರಸ್ ಸೋಂಕು ದೃಢಗೊಂಡಿದೆ. ಇದೇ ವೇಳೆ ನಾಲ್ಕು ಮಂದಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖ ರಾಗಿದ್ದಾರೆ. ಸೋಂಕಿತರು ಚೆಂಗಳ ನಿವಾಸಿಯಾದ 48, 20 ಮತ್ತು ಮೊಗ್ರಾಲ್‍ಪುತ್ತೂರಿನ 43 ವರ್ಷ ಪ್ರಾಯದ ವ್ಯಕ್ತಿಗಳಾಗಿದ್ದಾರೆ.
        ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 4619 ಮಂದಿ ನಿಗಾದಲ್ಲಿದ್ದು, ಈ ಪೈಕಿ 4567 ಮಂದಿ ಮನೆಗಳಲ್ಲೂ, 52 ಮಂದಿ ಆಸ್ಪತ್ರೆಗಳಲ್ಲೂ ನಿಗಾದಲ್ಲಿದ್ದಾರೆ. 3256 ಸ್ಯಾಂಪಲ್‍ಗಳ ಪೈಕಿ 2575 ಸ್ಯಾಂಪಲ್ ನೆಗೆಟಿವ್. 392 ಸ್ಯಾಂಪಲ್ ವರದಿ ಲಭಿಸಲು ಬಾಕಿಯಿದೆ. ಮಂಗಳವಾರ ಹೊಸದಾಗಿ 7 ಮಂದಿಯನ್ನು ಐಸೋಲೇಷನ್ ವಾರ್ಡ್‍ಗೆ ದಾಖಲಿಸಲಾಗಿದೆ.  ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ 172 ಮಂದಿಗೆ ಸೋಂಕು ಬಾ„ಸಿದ್ದು, 146 ಮಂದಿ ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
       ಕೇರಳ ರಾಜ್ಯದಲ್ಲಿ ಮಂಗಳವಾರ ಒಟ್ಟು 19 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಗೊಂಡಿದೆ. ಈ ಪೈಕಿ ಕಣ್ಣೂರು ಜಿಲ್ಲೆಯಲ್ಲಿ 10 ಮಂದಿಗೆ, ಪಾಲ್ಘಾಟ್-4, ಕಾಸರಗೋಡು-3, ಮಲಪ್ಪುರ ಮತ್ತು ಕೊಲ್ಲಂ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ಬಾ„ಸಿದೆ. ರಾಜ್ಯದಲ್ಲಿ ಒಟ್ಟು 16 ಮಂದಿ ಗುಣಮುಖರಾಗಿದ್ದಾರೆ. ಕಣ್ಣೂರಿನಲ್ಲಿ 9 ಮಂದಿ ವಿದೇಶದಿಂದ ಬಂದವರು ಹಾಗು ಒಬ್ಬರಿಗೆ ಸಂಪರ್ಕದಿಂದ ಸೋಂಕು ಬಾ„ಸಿದೆ. ಪಾಲ್ಘಾಟ್, ಮಲಪ್ಪುರಂ ಮತ್ತು ಕೊಲ್ಲಂ ಜಿಲ್ಲೆಯಲ್ಲಿ ತಲಾ ಒಬ್ಬರು ತಮಿಳುನಾಡಿನಿಂದ ಬಂದವರು. ಕಾಸರಗೋಡು ಜಿಲ್ಲೆಯ ಮೂವರು ವಿದೇಶದಿಂದ ಬಂದವರು.
      ಕೇರಳದಲ್ಲಿ ಈ ವರೆಗೆ ಒಟ್ಟು ಸೋಂಕು ಬಾ„ತರ ಸಂಖ್ಯೆ 426. ಇದೀಗ ವಿವಿಧ ಆಸ್ಪತ್ರೆಗಳಲ್ಲಿ 117 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 36667 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 36335 ಮಂದಿ ಮನೆಗಳಲ್ಲೂ, 332 ಮಂದಿ ಆಸ್ಪತ್ರೆಗಳಲ್ಲೂ ನಿಗಾದಲ್ಲಿದ್ದಾರೆ. ಮಂಗಳವಾರ 102 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ತನಕ 20,252 ಸ್ಯಾಂಪಲ್‍ಗಳನ್ನು ಪರೀಕ್ಷೆ ಮಾಡಲಾಗಿದೆ. ಲಭ್ಯ 19442 ಮಂದಿ ಸ್ಯಾಂಪಲ್ ನೆಗೆಟಿವ್ ಫಲಿತಾಂಶ ಬಂದಿದೆ.
       ಮಂಗಳವಾರ ಗುಣಮುಖರಾದವರಲ್ಲಿ ಕಣ್ಣೂರು ಜಿಲ್ಲೆಯಲ್ಲಿ 7 ಮಂದಿ, ಕಾಸರಗೋಡು-4, ಕಲ್ಲಿಕೋಟೆ-4, ತಿರುವನಂತಪುರ-1 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಅತ್ಯಂತ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಕಣ್ಣೂರು ಜಿಲ್ಲೆಯಲ್ಲಿದ್ದಾರೆ. ಒಟ್ಟು 104 ಮಂದಿಗೆ ಕೊರೊನಾ ವೈರಸ್ ಸೋಂಕು ಹರಡಿದ್ದು, ಒಂದು ಮನೆಯ 10 ಮಂದಿಗೆ ಸಂಪರ್ಕದ ಮೂಲಕ ಸೋಂಕು ಬಾ„ಸಿದೆ. ಈ ಹಿನ್ನೆಲೆಯಲ್ಲಿ ಕಣ್ಣೂರು ಜಿಲ್ಲೆಯ ಇನ್ನಷ್ಟು ತಪಾಸಣೆ ಬಿಗಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
       ದುಬೈಯಲ್ಲಿ ಸಾವು : ಕೊರೊನಾ ವೈರಸ್ ಸೋಂಕಿನಿಂದ ವರ್ಕಾಡಿ ಧರ್ಮನಗರದ ಮಜೀರ್‍ಪಳ್ಳದ ನಿವಾಸಿ ದಿ.ಇಬ್ರಾಹಿಂ ಅವರ ಪುತ್ರ ಅಬ್ದುಲ್ ಹಮೀದ್(38) ಅವರು ದುಬೈಯ ಆಸ್ಪತ್ರೆಯಲ್ಲಿ ಸಾವಿಗೀಡಾದರು. 20 ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಯಾಂಪಲ್ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಗೊಂಡಿತ್ತು. ಒಂದು ವಾರದ ಹಿಂದೆ ಅವರ ಪರಿಸ್ಥಿತಿ ಗಂಭೀರ ಸ್ಥಿತಿಗೆ ತಲುಪಿತ್ತು. ದುಬೈಯಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಅಶರು 8 ತಿಂಗಳ ಹಿಂದೆ ಊರಿಗೆ ಬಂದು ವಾಪಸಾಗಿದ್ದರು.
      ಸೋಮವಾರ ಕೇರಳದ ಒಟ್ಟಪ್ಪಾಲಂ ಮುಳಂಞೂರು ನೆಲ್ಲಿಕುರಿಶಿ ನಿವಾಸಿ ಕಬೀರ್(47) ಮತ್ತು ಪತ್ತನಂತಿಟ್ಟ ತುಂಬುಮನ್ ನಿವಾಸಿ ಕೋಶಿ ಸಕರಿಯಾ (51) ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದರು. ಈ ವರೆಗೆ ದುಬೈಯಲ್ಲಿ ಆರು ಮಂದಿ ಸಹಿತ ಕೊಲ್ಲಿ ರಾಷ್ಟ್ರದಲ್ಲಿ ಕೇರಳದ ಒಟ್ಟು 14 ಮಂದಿ ಸಾವಿಗೀಡಾಗಿದ್ದಾರೆ. ಹಲವು ಮಂದಿ ಕೊಲ್ಲಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries