ಕಾಸರಗೋಡು: ಕೊರೋನಾ ಸೋಂಕು ಬಾಧೆ ಎರಡನೇ ಹಂತಕ್ಕೆ ಕಾಲಿರಿಸಿದೆ. ಕಾಸರಗೋಡು ಜಿಲ್ಲೆ ಯವರಾದ 138 ಮಂದಿ ಈ ಬಾಧೆಯಿಂದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 160 ಮಂದಿಗೆ ಸೋಂಕು ಖಚಿತವಾಗಿದೆ. ಈ ವರೆಗೆ 22 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ.
ಇದೇ ವೇಳೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ 10 ಮಂದಿ, ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯಲ್ಲಿ 3, ಕೋಯಿಕೋಡ್ ಮೆಡಿಕಲ್ ಕಾಲೇಜ್ ನಲ್ಲಿ ಒಬ್ಬರು, ಕಣ್ಣೂರು ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ.ಎ.ವಿ.ರಾಮದಾಸ್ ತಿಳಿಸಿದರು. ಶುಕ್ರವಾರ(ಏ.10) ಬೆಳಗ್ಗೆ 11 ಗಂಟೆ ವರೆಗೆ ಕಾಸರಗೋಡು ಜನರಲ್ ಆಸ್ಪತ್ರೆಯಿಂದ 6 ಮಂದಿ, ಜಿಲ್ಲಾ ಸರಕಾರಿ ಆಸ್ಪತ್ರೆಯಿಂದ 3 ಮಂದಿ ಬಿಡುಗಡೆಗೊಂಡಿದ್ದಾರೆ ಎಂದವರು ತಿಳಿಸಿದರು.


