ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇರನ್ ಸೆಕ್ಟರ್‍ನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿದ್ದು ಗುಂಡಿನ ದಾಳಿಯಲ್ಲಿ ಅಪ್ರಾಪ್ತ ಸೇರಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಾಕಿಸ್ತಾನದ ಪಡೆಗಳು ಭಾನುವಾರ ಸಂಜೆ 5.00 ರ ಸುಮಾರಿಗೆ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಯನ್ನು ಪ್ರಾರಂಭಿಸಿದ್ದು, ನಾಗರಿಕರನ್ನು ಗುರಿಯಾಗಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಭಾನುವಾರ, ಸಹ ಈ ಪ್ರದೇಶದಲ್ಲಿ ಉಗ್ರರು-ಸೇನಾಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದದ್ದು ಇದರಲ್ಲಿ ಐದು ಮಂದಿ ಉನ್ನತ ಸೇನಾ ಕಮಾಂಡೋಗಳು ತಮ್ಮ ಪ್ರಾಣವನ್ನು ಅರ್ಪಿಸಿಸಿದ್ದರು.


