ನವದೆಹಲಿ: ಇದುವರೆಗೆ ದೇಶದ 216 ಜಿಲ್ಲೆಗಳಲ್ಲಿ ಯಾವುದೇ ಕೊವಿಡ್-19 ಪ್ರಕರಣಗಳು ಪತ್ತೆಯಾಗಿಲ್ಲ. 42 ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಿಂದ ಯಾವುದೇ ಹೊಸ ಕೊರೋನಾ ಪ್ರಕರಣ ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ ಅವರು, ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಪೀಕ್ ಹೋಗದಂತೆ ತಡೆಯಲು ಆರೋಗ್ಯ ಸಚಿವಾಲಯ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಭರವಸೆ ನೀಡಿದರು. ಕಳೆದ 21 ದಿನಗಳಿಂದ ದೇಶದ 28 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ಕಳೆದ 14 ದಿನಗಳಿಂದ 36 ಜಿಲ್ಲೆಗಳಲ್ಲಿ ಮತ್ತು ಕಳೆದ ಏಳು ದಿನಗಳಿಂದ 46 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ. 29.36ರಷ್ಟು ಇದೆ ಎಂದರು.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,390 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 56,342 ಏರಿಕೆಯಾಗಿದೆ. ಇನ್ನು ಇಂದು ಒಂದೇ 103 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1886ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.