HEALTH TIPS

ಕೋವಿಡ್-19 ಸೋಂಕಿಗೆ ತುತ್ತಾಗುವವರ ಪತ್ತೆಗೆ ಸಮೀಕ್ಷೆ ನಡೆಸಲು ಭಾರತೀಯ ವೈದ್ಯಕೀಯ ಮಂಡಳಿ ರಾಜ್ಯಗಳಿಗೆ ಸೂಚನೆ


         ನವದೆಹಲಿ: ಕೊರೋನಾ ವೈರಸ್ ಸೋಂಕಿಗೆ ತುತ್ತಾಗುವ ಲಕ್ಷಣರಹಿತ ವ್ಯಕ್ತಿಗಳನ್ನು ಮೌಲ್ಯಮಾಪನ ಮಾಡಲು ಕೇಂದ್ರದ ಆರೋಗ್ಯ ಸಂಶೋಧನಾ ಸಂಸ್ಥೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸಿರೊ ಸಮೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿದೆ.
         ಈ ಹಿಂದೆ ಎಷ್ಟು ಮಂದಿ ಕೊರೋನಾ ಸೋಂಕಿಗೆ ತುತ್ತಾದರು ಮತ್ತು ಇಂದು ಎಷ್ಟು ಮಂದಿ ಗುಣಮುಖರಾಗಿದ್ದಾರೆ ಎಂದು ಪತ್ತೆಹಚ್ಚಲು ರಕ್ತ ಪರೀಕ್ಷೆ ಮಾಡಿಸುವ ಪ್ರಯೋಗವನ್ನು ಈ ಸಮೀಕ್ಷೆ ಒಳಗೊಂಡಿದೆ. ಅಲ್ಲದೆ ಸೋಂಕಿಗೆ ಹೆಚ್ಚು ತುತ್ತಾಗುವ ಸಾಧ್ಯತೆಯಿರುವ ಜನರನ್ನು ಸಹ ಸಮೀಕ್ಷೆಗೊಳಪಡಿಸಲಾಗುತ್ತದೆ.
      ಕೊರೋನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು, ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಿರುವವರು, ಕಂಟೈನ್ ಮೆಂಟ್ ವಲಯಗಳಲ್ಲಿ ಇರುವ ವ್ಯಕ್ತಿಗಳು, ಪೆÇಲೀಸ್ ಸಿಬ್ಬಂದಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries