ಕಾಸರಗೋಡು: ಜಿಲ್ಲಾ ರೂಪೀಕರಣದ ವಾರ್ಷಿಕದಂಗವಾಗಿ ಬಿಜೆಪಿ ವತಿಯಿಂದ 2 ಲಕ್ಷ ಮಾಸ್ಕ್‍ಗಳನ್ನು ವಿತರಿಸಲಾಯಿತು. ಬಿಜೆಪಿ ಕಾರ್ಯಕರ್ತರು ಮನೆ ಮನೆಗಳಿಗೆ ಮಾಸ್ಕ್‍ಗಳನ್ನು ತಲುಪಿಸಿದರು.
ಬಿಜೆಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆಯೋಜಿಸಿದ ಮಾಸ್ಕ್ ವಿತರಣೆ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಉದ್ಘಾಟಿಸಿದರು. ಜಿಲ್ಲಾ ಉಪಾಧ್ಯಕ್ಷ ನ್ಯಾಯವಾದಿ ಸದಾನಂದ ರೈ, ಸವಿತಾ ಟೀಚರ್, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ರಾಜ್ಯ ಕೌನ್ಸಿಲ್ ಸದಸ್ಯ ಎನ್.ಬಾಬುರಾಜ್ ಮೊದಲಾದವರು ಉಪಸ್ಥಿತರಿದ್ದರು.
ಕಾಸರಗೋಡು ವಿಧಾನಸಭಾ ಕ್ಷೇತ್ರ ಮಟ್ಟದ ಉದ್ಘಾಟನೆಯನ್ನು ಬದಿಯಡ್ಕದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ ನಿರ್ವಹಿಸಿದರು. ಕಾಸರಗೋಡು ಮಂಡಲ ಅಧ್ಯಕ್ಷ ಹರೀಶ್ ನಾರಂಪಾಡಿ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್.ಸುನಿಲ್ ಸ್ವಾಗತಿಸಿ, ಸುಕುಮಾರ ಕುದ್ರೆಪ್ಪಾಡಿ ವಂದಿಸಿದರು. ಕಾಸರಗೋಡು ನಗರಸಭೆಯಲ್ಲಿ ಮಂಡಲ ಉಪಾಧ್ಯಕ್ಷ ರವಿ ಪೂಜಾರಿ, ಮೊಗ್ರಾಲ್ ಪುತ್ತೂರಿನಲ್ಲಿ ಮಹಿಳಾ ಮೋರ್ಚಾ ಮಂಡಲ ಉಪಾಧ್ಯಕ್ಷೆ ಗೀತಾ ಬಾಲನ್ ಉದ್ಘಾಟಿಸಿದರು.

