ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ ಒಬ್ಬರಿಗೆ ಕೋವಿಡ್ ಸೋಂಕು ಖಚಿತಗೊಂಡಿದೆ. ತ್ರಿಕರಿಪುರ ನಿವಾಸಿ 15 ವರ್ಷದ ಬಾಲಕನಿಗೆ ಸೋಂಕು ಖಚಿತಗೊಂಡಿದೆ. ಇವರು ಕೊಲ್ಲಿರಾಷ್ಟ್ರದಿಂದ ಊರಿಗೆ ಬಂದಿದ್ದರು.
ಜಿಲ್ಲೆಯಲ್ಲಿ ಬುಧವಾರ ಒಬ್ಬರು ರೋಗದಿಂದ ಗುಣಮುಖರಾಗಿದ್ದಾರೆ. ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಯಕರ್ತರಾಗಿ ದುಡಿಯುತ್ತಿರುವ ವ್ಯಕ್ತಿ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ 2498 ಮಂದಿ ನಿಗಾದಲ್ಲಿದ್ದಾರೆ. 2078 ಮಂದಿ ಮನೆಗಳಲ್ಲಿ, 420 ಮಂದಿ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ. ಬುಧವಾರ ನೂತನವಾಗಿ 32 ಮಂದಿ ಐಸೊಲೇಷನ್ ವಾರ್ಡಿಗೆ ದಾಖಲಾಗಿದ್ದಾರೆ. 101 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ.
ಜಿಲ್ಲೆಯಲ್ಲಿ 5844 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 5234 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ. 211 ಮಂದಿಯ ಫಲಿತಾಂಶ ಲಭಿಸಿಲ್ಲ.
ಮಂಜೇಶ್ವರ ಚೆಕ್ ಪೆÇೀಸ್ಟ್ ಮೂಲಕ ಬುಧವಾರ 408 ಮಂದಿಯ ಕೇರಳ ಪ್ರವೇಶ
ಮಂಜೇಶ್ವರ ಚೆಕ್ ಪೆÇೀಸ್ಟ್ ಮೂಲಕ ಬುಧವಾರ 408 ಮಂದಿ ಕೇರಳ ಪ್ರವೇಶ ಮಾಡಿದ್ದಾರೆ. 668 ಮಂದಿಗೆ ಬುಧವಾರ ಪಾಸ್ ಮಂಜೂರು ಮಾಡಲಾಗಿದೆ. ಈ ವರೆಗೆ ಮಂಜೇಶ್ವರ ಚೆಕ್ ಪೆÇೀಸ್ಟ್ ಮೂಲಕ ಒಟ್ಟು 14501 ಮಂದಿ ಕೇರಳ ಪ್ರವೇಶ ಮಾಡಿದ್ದಾರೆ. 31961 ಮಂದಿಗೆ ಪಾಸ್ ಮಂಜೂರುಮಾಡಲಾಗಿದೆ. ಕಾಸರಗೋಡು ಜಿಲ್ಲೆಯವರಾದ 3232 ಮಂದಿ ಊರಿಗೆ ಬಂದಿದ್ದಾರೆ. 7527 ಮಂದಿಗೆ ಪಾಸ್ ಮಂಜೂರು ಮಾಡಲಾಗಿದೆ.


