ಕಾಸರಗೋಡು: ಕರೊನಾ ಪ್ರತಿರೋಧ ಚಟುವಟಿಕೆಗಳಲ್ಲಿ ಮುಂಚೂಣಿಯ ಹೋರಾಟಗಾರರಾಗಿರುವ ಆರೋಗ್ಯಇಲಾಖೆ ಕಾರ್ಯಕರ್ತರನ್ನು ರಾಜ್ಯ ಸರ್ಕಾರದ ವತಿಯಿಂದ ಅಭಿನಂದಿಸಲಾಯಿತು.
ಉಕ್ಕಿನಡ್ಕದ ಕಾಸರಗೋಡು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಕಂದಾಯ ಸಚಿವ ಇ.ಚಂದ್ರಶೇಖರನ್ ಕಾರ್ಯಕರ್ತರನ್ನು ಅಭಿನಂದಿಸಿದರು. ಈ ಸಂದರ್ಭ ಮಾತನಾಡಿ, ಜಿಲ್ಲಾಡಳಿತೆ, ಪೆÇಲೀಸ್ ಇಲಾಖೆ ಮತ್ತು ಸಾರ್ವಜನಿಕ ಜಾಗೃತಿ ಕೂಡ ಈ ನಿಟ್ಟಿನಲ್ಲಿ ಬಲುದೊಡ್ಡ ವರದಾನವಾಗಿದೆ ಎಂದು ತಿಳಿಸಿದರು.
ಶಾಸಕ ಎಂ.ರಾಜಗೋಪಾಲನ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ಟಿ.ಮನೋಜ್,ಎನ್.ಎಚ್.ಎಂ. ಜಿಲ್ಲಾ ಯೋಜನೆ ಪ್ರಬಂಧಕ ಡಾ.ರಾಮನ್ ಸ್ವಾತಿ ವಾಮನ್, ಆಲಪ್ಪುಳ ಸರ್ಕಾರಿ ಮೆಡಿಕಲ್ ಕಾಲೇಜು ಸಹಾಯಕ ವರಿಷ್ಠಾಧಿಕಾರಿ ಡಾ.ಎ.ಅಬ್ದುಲ್ ಸಲಾಂ, ವೈದ್ಯರು, ದಾದಿಯರು, ಪಾರಾ ಮೆಡಿಕಲ್ ಸಿಬ್ಬಂದಿ, ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಆಲಪ್ಪುಳ ಸರ್ಕಾರಿ ಮೆಡಿಕಲ್ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.


