ಕಾಸರಗೋಡು: ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಅಳವಡಿಸಿ ಮಾಣಿಕೋತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಆಡಳಿತೆ ಮಂಜೂರಾತಿ ಲಭಿಸಿದೆ.
ಒಂಭತ್ತನೇ ತರಗತಿ ಕೊಠಡಿಗಳ ಸಹಿತದ ನೂತನಕಟ್ಟಡ ನಿರ್ಮಾಣಕ್ಕಾಗಿ 1.34 ಕೋಟಿ ರೂ. ಮೀಸಲಿರಿಸಲಾಗಿದೆ. ಕಾಞಂಗಾಡ್ ಶಾಸಕ, ಕಂದಾಯ ಸಚಿವ ಇ.ಚಂದ್ರಶೇಖರನ್ ಅವರ ಸ್ಥಳೀಯ ಅಭಿವೃಧ್ಧಿ ನಿಧಿಯಿಂದ 50 ಲಕ್ಷ ರೂ., ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಿಂದ 84 ಲಕ್ಷ ರೂ. ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು.

