ಕಾಸರಗೋಡು: ಕೋವಿಡ್ ಸೋಂಕಿನ ಹರಡುವಿಕೆಯ ಮೂರನೇ ಹಂತದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ರೋಗಗಳ ಸಂಖ್ಯೆ ಹೆಚ್ಚಳಗೊಳ್ಳುತ್ತಿರುವುದು ಗಂಭೀರ ಸಮಸ್ಯೆಯಾಗಿದೆ. ಸಾರ್ವಜನಿಕರು ಈ ವಿಚಾರವನ್ನು ಗಂಭೀರವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿರುವರು.
ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ತಿಳಿಸಿರುವ ಕಟ್ಟುನಿಟ್ಟುಗಳನ್ನು ಕಡ್ಡಾಯವಾಗಿ ಪಾಲಿಸಿ, ಜಾಗರೂಕತೆಯಿಂದ ಇರುವಂತೆ, ಸೋಂಕಿನ ಸಾಮಾಜಿಕ ಹರಡುವಿಕೆಯನ್ನು ತಡೆಗಟ್ಟುವಂತೆ ಅವರು ಸಲಹೆಮಾಡಿದ್ದಾರೆ. ಈ ಕಾಲಾವಧಿಯಲ್ಲಿ ವಿದೇಶಗಳಿಂದ 646 ಂದಿ, ಇತರ ರಾಜ್ಯಗಳಿಂದ 4976 ಮಂದಿ ಕಾಸರಗೋಡು ಜಿಲ್ಲೆಗೆ ಆಗಮಿಸಿದ್ದಾರೆ ಎಂದವರು ಹೇಳಿರುವರು.


